ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ ರಾಜೇಶ್ವರಿ ಜಾಮೀನು ಅರ್ಜಿ ತಿರಸ್ಕರಿಸಿದ ಹೈ ಕೋರ್ಟ್
ಉಡುಪಿ : ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಬಂಧಿತಳಾಗಿರುವ ಪತ್ನಿ ರಾಜೇಶ್ವರಿ ಶೆಟ್ಟಿಗೆ ಬಿಡುಗಡೆಯ ಭಾಗ್ಯ ಇನ್ನೂ ಸಿಗುತ್ತಿಲ್ಲ. ರಾಜೇಶ್ವರಿ ಶೆಟ್ಟಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಿನ್ನೆ ನಡೆದಿದ್ದು, ಹೈಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
2ನೇ ಆರೋಪಿ ರಾಜೇಶ್ವರಿ ಶೆಟ್ಟಿ ಪುತ್ರ ನವನೀತ್ ಶೆಟ್ಟಿ ಜಾಮೀನು ಅರ್ಜಿ ಕೂಡಾ ಸಲ್ಲಿಕೆಯಾಗಿದ್ದು, ಇನ್ನೂ ವಿಚಾರಣೆಗೆ ಬಂದಿಲ್ಲ.
ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪತ್ನಿ ರಾಜೇಶ್ವರಿ, ಪುತ್ರ ನವನೀತ, ಸ್ವಯಂಘೋಷಿತ ಜೋತಿಷಿ ನಿರಂಜನ ಭಟ್ಟ ಮೂವರೂ ಮಂಗಳೂರು ಸಬ್ ಜೈಲ್‍ನಲ್ಲಿದ್ದಾರೆ
loading...
No comments