ರುದ್ರೇಶ್ ಹತ್ಯೆ ಎನ್‌ಐಎ ತನಿಖೆಗೆ ಹೈಕೋರ್ಟ್ ಆದೇಶ
ಬೆಂಗಳೂರು : ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆ ಮುಂದುವರೆಸುವಂತೆ ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ.
ರಾಷ್ಟ್ರೀಯ ತನಿಖಾ ತಂಡ (ಎನ್ಐಎ) ತನಿಖೆ ಮಾಡುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ವಿಭಾಗೀಯ ಪೀಠ, ಎನ್‌ಐಎಗೆ ತನಿಖೆ ಮುಂದುವರಿಸಲು ಆದೇಶಿಸಿದೆ. ಅಲ್ಲದೆ, ಈ ಸಂಬಂಧ ಆರೋಪ ಪಟ್ಟಿಯನ್ನು ಸಲ್ಲಿಸುವಂತೆಯೂ ಕೂಡ ನ್ಯಾಯಾಲಯ ಸೂಚನೆ ನೀಡಿದೆ.
ಎನ್‌ಐಎ ವಿಚಾರಣೆ ಹೈಕೋರ್ಟ್‌ನ ತೀರ್ಪಿಗೆ ಒಳಪಟ್ಟಿರುತ್ತದೆ ಎಂದೂ ಕೂಡ ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ.
loading...
No comments