Breaking News

ಖುರೇಷಿ ಆರೋಗ್ಯ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವ ಕಿಡಿಗೇಡಿಗಳ ವಿರುದ್ಧ ಕ್ರಮ : ಚಂದ್ರ ಶೇಖರ್



ಮಂಗಳೂರು ; ಕೊಲೆ ಪ್ರಕರಣವೊಂದರಲ್ಲಿ ಬಂಧಿತನಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಹಮ್ಮದ್ ಖುರೇಷಿ  ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಚಂದ್ರಶೇಖರ್ ಮಂಗಳೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಖಚಿತ ಪಡಿಸಿದರು.

ಖುರೇಷಿ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಸುಳ್ಳು ಸುದ್ದಿಯನ್ನು ಕೆಲ ಕಿಡಿಗೇಡಿಗಳು ಹಬ್ಬಿಸುತ್ತಿದ್ದಾರೆ .ಖುರೇಷಿ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವ ವ್ಯಕ್ತಿಗಳು ಒಂದು ಸಂಘಟನೆಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡು ಈ ರೀತಿ ಸಮಾಜ ಘಾತುಕ ಕೃತ್ಯ ಎಸಗುತ್ತಿದ್ದಾರೆ .ದ್ವೇಷ ಪೂರಿತ ಸುದ್ದಿ  ಹಬ್ಬಿಸುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದರು .ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಐಟಿ ಆಕ್ಟ್ ಅನ್ವಯ  WhatsApp ಮತ್ತು ಫೇಸ್ಬುಕ್ ಗುಂಪುಗಳ ನಿರ್ವಾಹಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು .


ರೌಡಿ ಶೀಟರ್ ಅಹಮ್ಮದ್  ಖುರೇಷಿಗೆ ವೆನ್ಲಾಕ್ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು .ಈತನ ಆರೋಗ್ಯ ಸ್ಥಿರವಾಗಿದೆ ಎಂದು ವೆನ್ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ದ್ರಢ ಪಡಿಸಿದ್ದಾರೆ ಎಂದು ಹೇಳಿದರು .
ಅಹಮ್ಮದ್ ಖುರೇಷಿ 2014 ರಲ್ಲಿ  ನಡೆದ ಸುದರ್ಶನ ಕೊಲೆ ಮತ್ತು ಜೋಕಟ್ಟೆ  ಪ್ರಕಾಶ್ ಪೂಜಾರಿ ಕೊಲೆಗೆ ಯತ್ನ ಪ್ರಕರಣದ ಪ್ರಮುಖ ಆರೋಪಿ ಕೂಡ ಆಗಿದ್ದು  ತಾನು ಮಾಡಿದ ಕೃತ್ಯದ ಪೊಲೀಸ್ ತನಿಖೆಯಲ್ಲಿ ಒಪ್ಪಿಕೊಡಿದ್ದಾನೆ ಎಂದರು .ಖುರೇಷಿ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ ಎಂದು ಅವನ  ಕುಟುಂಬದವರು  ಮಾಡುತ್ತಿರುವ  ಆರೋಪದ ಬಗ್ಗೆ ಉಪ ಪೊಲೀಸ್ ಕಮೀಷನರ್ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು ಎಂದರು ,

loading...

No comments