Breaking News

ಸಾರ್ವಜನಿಕ ಸಮೀಕ್ಷೆ ಆದರಿಸಿ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ



ಬೆಂಗಳೂರು  : 2018 ವಿಧಾನ ಸಭಾ ಚುನಾವಣೆಗೆ ಬಿಜೆಪಿಯ  ಟಿಕೆಟ್ ಆಕಾಂಕ್ಷಿಗಳು ಟಿಕೆಟ್ ಪಡೆಯಲು ನಾನಾ ರೀತಿಯ ಕಸರತ್ತು ನಡೆಸುತ್ತಿದ್ದಾರೆ .ಬಿಜೆಪಿ ಮೂಲಗಳ ಪ್ರಕಾರ  ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಾರ್ವಜನಿಕ ಸಮೀಕ್ಷೆಯನ್ನು ನಡೆಸಿ ಜನಪ್ರಿಯ ನಾಯಕರ ಪಟ್ಟಿಯನ್ನು ತಯಾರಿಸಿ   ಬಿಜೆಪಿ  ರಾಷ್ಟ್ರಧ್ಯಕ್ಷ ಅಮಿತ್ ಶಾ ಅವರ ಮುಂದೆ ಇಡಲಾಗುವುದು, ಸಮೀಕ್ಷೆ ನಡೆಸಲು ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ನೇಮಿಸಿ ,ಸಾಮಾಜಿಕ ಜಾಲ ತಾಣದ ಮೂಲಕ ಕೂಡ  ಅಭಿಪ್ರಾಯ ಪಡೆದು ಸಮೀಕ್ಷೆ ನಡೆಸಲಾಗುವುದು ಎಂದು ತಿಳಿದು ಬಂದಿದೆ .ಅದಲ್ಲದೆ ಕಳೆದ ಬಾರಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪಕ್ಷವನ್ನು ಮುಜುಗರಕ್ಕೆ ಈಡು ಮಾಡಿದ ಬಿಜೆಪಿ ನಾಯಕರಿಗೆ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಲಾಗುವುದಿಲ್ಲ ಎಂದು ಬಿಜೆಪಿಯ ಬಲ್ಲ ಮೂಲಗಳಿಂದ ತಿಳಿದು ಬಂದಿದೆ .

loading...

No comments