ಯೋಧ ತೇಜ್‍ಬಹದ್ದೂರ್ ಸೇವೆಯಿಂದ ವಜಾ
ನವದೆಹಲಿ: ಬಿಎಸ್‌ಎಫ್ ಯೋಧರಿಗೆ ಕಳಪೆ ಆಹಾರ ನೀಡುತ್ತಿರುವ ಬಗ್ಗೆ ಫೇಸ್‌ಬುಕ್‌ನಲ್ಲಿ ವಿಡಿಯೊ ಅಪ್‌ಲೋಡ್ ಮಾಡಿದ್ದ ಬಿಎಸ್‌ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.
ಕೋರ್ಟ್ ತನಿಖಾ ವರದಿಯನ್ನು ಆಧರಿಸಿ ಯಾದವ್ ಅವರನ್ನು ಕೆಲಸದಿಂದ ತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ತೇಜ್ ಬಹದ್ದೂರ್ ಯಾದವ್ ಅವರು ಸೇನೆ ವಿರುದ್ಧ ಸುಳ್ಳು ಆರೋಪ ಮಾಡಿರುವುದು ತನಿಖೆಯ ವೇಳೆ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ. ಲವು ತಿಂಗಳುಗಳ ಹಿಂದೆ ತೇಜ್ ಬಹದ್ದೂರ್ ಯಾದವ್ ವಿಡಿಯೋ ಒಂದನ್ನು ಮಾಡಿ ಸಾಮಾಜಿಕ ಜಾಲತಾಣಗಳಿಗೆ ಪೋಸ್ಟ್ ಮಾಡಿದ್ದರು. ಈ ವಿಡಿಯೋದಲ್ಲಿ ಸೈನಿಕರಿಗೆ ಪೂರೈಸಲಾಗುತ್ತಿರುವ ಆಹಾರದ ಬಗ್ಗೆ ತೇಜ್ ಬಹದ್ದೂರ್ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಕುರಿತು ತನ್ನನ್ನು ಬೆಂಬಲಿಸುವಂತೆ ಪ್ರಧಾನಿ ನರೇಂದ್ರ ಮೋದಿಗೂ ಮನವಿಯನ್ನು ಸಲ್ಲಿಸಿದ್ದರು.
loading...
No comments