Breaking News

ಸಿದ್ದು ಪುತ್ರ ಡಾ. ಯತೀಂದ್ರ ಅವರಿಗೆ ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕ ಪಟ್ಟಬೆಂಗಳೂರು: ನಂಜನಗೂಡು ಮತ್ತು ಗುಂಡ್ಲು ಪೇಟೆ ಉಪಚುನಾವಣೆಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಈಗ ಕಾಂಗ್ರೆಸ್‌ನ ಸ್ಟಾರ್‌ ಪ್ರಚಾರಕ ಆಗಿ ಹೊರಹೊಮ್ಮಿದ್ದಾರೆ .
ಇದಕ್ಕೆ ಪೂರಕವಾಗುವಂತೆ  ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಗೆ ಕಾಂಗ್ರೆಸ್‌ ಶನಿವಾರ ಬಿಡುಗಡೆ ಮಾಡಿರುವ 40 ಮಂದಿ ಸ್ಟಾರ್‌ ಪ್ರಚಾರಕರ ಪರಿಷ್ಕೃತ ಪಟ್ಟಿಯಲ್ಲಿ ಈ ಬದಲಾವಣೆ ಉಂಟಾಗಿದೆ. ಈ ಹಿಂದೆ ಇದೇ ಉಪ ಚುನಾವಣೆಗಾಗಿ ಕಾಂಗ್ರೆಸ್‌ ಸಿದ್ಧಪಡಿಸಿದ್ದ ಪಟ್ಟಿಯಲ್ಲಿ ರಮ್ಯಾ ಹಾಗೂ ಅಂಬರೀಶ್‌ ಅವರು ಇದ್ದರು. ಆದರೆ, ಯತೀಂದ್ರ ಇರಲಿಲ್ಲ. ಈಗ ಪರಿಷ್ಕೃತ ಪಟ್ಟಿಯಲ್ಲಿ ಯತೀಂದ್ರ ಅವರ ಹೆಸರು ದಾಖಲು ಆಗಿದೆ

ಇನ್ನು ಸಿಎಂ ಪುತ್ರ ಯತೀಂದ್ರ ಅವರು ನಂಜನಗೂಡು ಕ್ಷೇತ್ರದಲ್ಲಿ ಸಾಕಷ್ಟುಕ್ರಿಯಾಶೀಲವಾಗಿ ಪ್ರಚಾರದಲ್ಲಿ ತೊಡಗಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಪಟ್ಟಿಗೆ ಸೇರಿಸಲಾಗಿದೆ ಎಂಬುದು ಕಾಂಗ್ರೆಸ್‌ ಮೂಲಗಳು ಹೇಳಿವೆ .


loading...

No comments