ಬಂಟ್ವಾಳ ತಾಲ್ಲೂಕಿನಾದ್ಯಂತ 144 ಸೆಕ್ಷನ್ ಜಾರಿ
ಮಂಗಳೂರು: ಕಲ್ಲಡ್ಕದಲ್ಲಿ ಶುಕ್ರವಾರ ಕೋಮು ಘರ್ಷಣೆಯಿಂದ ಮಧ್ಯಾಹ್ನ ಯುವಕನೊಬ್ಬನಿಗೆ ಚೂರಿ ಇರಿತ ಪ್ರಕರಣದಿಂದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾದ ಕಾರಣದಿಂದ ಬಂಟ್ವಾಳ ತಾಲ್ಲೂಕಿನಾದ್ಯಂತ ಶನಿವಾರ ಬೆಳಿಗ್ಗೆ 9ರಿಂದ ಜೂನ್ 2ರ ಸಂಜೆ 6ರವರೆಗೆ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಕಲ್ಲಡ್ಕದಲ್ಕಿ ಮೊಕ್ಕಾಂ ಹೂಡಿದ್ದು ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.
No comments