Breaking News

ಕಲ್ಲಡ್ಕದಲ್ಲಿ ದುಷ್ಕರ್ಮಿಗಳಿಂದ ಯುವಕನೊಬ್ಬನಿಗೆ ಚೂರಿ ಇರಿತ


ಬಂಟ್ವಾಳ : ಕಲ್ಲಡ್ಕದಲ್ಲಿ ಮೂವರು ಅಜ್ಞಾತ ವ್ಯಕ್ತಿಗಳು ಯುವಕನೊಬ್ಬನಿಗೆ ಚೂರಿ ಇರಿದು ಕೊಲೆ ಯತ್ನ ನಡೆಸಿದ ಘಟನೆ ವರದಿ ಆಗಿದೆ.
ಕಲ್ಲಡ್ಕ ನಿವಾಸಿ ಯೂಸುಫ್ ಎಂಬವರ ಪುತ್ರ ಮುಹಮ್ಮದ್ ಆಸಿರ್ (21)  ಚೂರಿ ಇರಿತದಿಂದ ಗಾಯಗೊಂಡ ಯುವಕ. ಗಾಯಾಳುವನ್ನು ಬಂಟ್ವಾಳದ ಖಾಸಗಿ ಅಸ್ಫತ್ರೆಗೆ ಸೇರಿಸಲಾಗಿದ್ದು.
ಘಟನೆ ಸಂಬಂಧ ಪಟ್ಟಂತೆ ಬಂಟ್ವಾಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೋಮು ಸೂಕ್ಷ್ಮ ಪ್ರದೇಶವಾದ ಕಲ್ಲಡ್ಕ ಘಟನೆಯಿಂದ ಬೂದಿ ಮುಚ್ಚಿದ ಕೆಂಡದಂತಾಗಿದ್ದು ಇದೀಗ ಕಲ್ಲಡ್ಕದಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ.

No comments