ಮಿಥುನ್ ರೈ ಅನ್ನು ಟೀಕಿಸಿದ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ
ಮೂಡಬಿದಿರೆ : ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಬರಹಗಳನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಶೇರ್ ಮಾಡಿದ ಆರೋಪದ ಮೇಲೆ ಬಿಜೆಪಿ ಕಾರ್ಯಕರ್ತನೋರ್ವನಿಗೆ ಮೂಡಬಿದ್ರೆ ಯುವ ಕಾಂಗ್ರೆಸ್ ಅಧ್ಯಕ್ಷ ಸಹಿತ ಮೂವರು ಹಲ್ಲೆ ನಡೆಸಿದ ಘಟನೆ ಕಲ್ಲಮುಂಡ್ಕೂರಿನಲ್ಲಿ ನಡೆದಿದೆ.
ಘಟನೆ ಸಂಬಂಧ ಮೂಡುಬಿದಿರೆ ಯುವ ಕಾಂಗ್ರೆಸ್ ಅಧ್ಯಕ್ಷ ಸಹಿತ 3 ಮಂದಿ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.ಹಲ್ಲೆಗೊಳಗಾದ ಯುವಕನನ್ನು ಕಲ್ಲಮುಂಡ್ಕೂರಿನ ಗ್ಲೆನ್ ವಿಶಾಲ್ ಡಿಸಿಲ್ವಾ ಎಂದು ಗುರುತಿಸಲಾಗಿದೆ. ಈತನ ಮೇಲೆ ಮೂಡಬಿದ್ರೆ ಯುವಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ ಸನಿಲ್ ಮತ್ತವರ ತಂಡ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ವಿಶಾಲ್ ಫೇಸ್‌ಬುಕ್ ಸಹಿತ ಇತರ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ವಿರೋದಿ ಮತ್ತು ವಯಕ್ತಿಕ ನಿಂದನೆಯುಳ್ಳ ಬರಹಗಳನ್ನು ಪ್ರಕಟಿಸಿದಲೆನ್ನಲಾಗಿದ್ದು, ಇದೇ ಕಾರಣಕ್ಕೆ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಕೆಲಸ ಮಾಡುವ ವಿಶ್ವಾಸ್ ಸದ್ಯ ಕಲ್ಲಮುಂಡ್ಕೂರಿನಲ್ಲಿರುವ ತನ್ನ ಮನೆಗೆ ಬಂದಿದ್ದು, ಇದನ್ನರಿತ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಇತರ ಕಾರ್ಯಕರ್ತರು ವಿಶಾಲ್ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಸಂದರ್ಭ ವಿಶಾಲ್ ಮನೆಯಲ್ಲಿ ಅವರ ತಂದೆ ಮತ್ತು ತಂಗಿ ಇದ್ದು, ಇವರ ಸಮ್ಮುಖದಲ್ಲೇ ವಿಶಾಲ್ ಎದೆ, ಹೊಟ್ಟೆ ಹಾಗು ಮರ್ಮಾಂಗಗಳಿಗೆ ತುಳಿದು ಮಾರಣಾಂತಿಕ ಹಲ್ಲೆ ನಡೆಸಿರುವುದಾಗಿ ದೂರಲಾಗಿದೆ. ತೀವ್ರವಾಗಿ ಗಾಯಗೊಂಡ ವಿಶಾಲ್ ಗ್ಲೆನ್ ಡಿಸಿಲ್ವಾ ಅವರನ್ನು ಮೂಡಬಿದ್ರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತುಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರತಿದೂರು
ಫೇಸ್ಬುಕ್ಕಿನಲ್ಲಿ ಕಾಂಗ್ರೆಸ್ ಬಗ್ಗೆ ಅವಹೇಳನಕಾರಿ ಬರಹಗಳನ್ನು ಬರೆದು ಅದನ್ನು ಇತರರಿಗೆ ಶೇರ್ ಮಾಡಿದನ್ನು ಪ್ರಶ್ನಿಸಿದಕ್ಕೆ ಗ್ಲೆನ್ ಡಿಸಿಲ್ವ ನನಗೆ ಹಲ್ಲೆ ನಡೆಸಿದ್ದಾರೆಂದು ಚಂದ್ರಹಾಸ್ ಸನಿಲ್ ಮೂಡುಬಿದಿರೆ ಪೊಲೀಸರಿಗೆ ಪ್ರತಿದೂರು ನೀಡಿದ್ದಾರೆ. ಎರಡೂ ಕಡೆಯ ದೂರುಗಳನ್ನು ಪೊಲೀಸರು ಸ್ವೀಕರಿಸಿದ್ದರೂ ಎಫ್ಫೈರ್ ದಾಖಲಿಸಿಲ್ಲ. ಎಫ್ಫೈರ್ ದಾಖಲಿಸಲು ಪೊಲೀಸರು ಕೋರ್ಟ್ ಅನುಮತಿ ಕೋರಿದ್ದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
loading...
No comments