''ರಾಸಲೀಲೆ'' ಸಾಕ್ಷ್ಯಾಧಾರ ಕೊರತೆ ಮೇಟಿಗೆ ಕ್ಲೀನ್‌ಚಿಟ್ ಸಿಐಡಿ
ಬೆಂಗಳೂರು : ಕರ್ನಾಟಕದಲ್ಲಿ ಸದ್ದು ಮಾಡಿದ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ವೈ. ಮೇಟಿ ಅವರಿಗೆ ಕ್ಲೀನ್‌ಚಿಟ್ ನೀಡಿರುವ ಸಿಐಡಿ ಅಧಿಕಾರಿಗಳು ಈ ಸಂಬಂಧದ ವರದಿಯನ್ನು ಗೃಹ ಇಲಾಖೆಗೆ ಸಲ್ಲಿಸಿದ್ದಾರೆ.
ಮಹಿಳೆಯ ಮೇಲಿನ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ನಿರೀಕ್ಷೆಯಂತೆ ಮೇಟಿ ಅವರನ್ನು ದೋಷ ಮುಕ್ತಗೊಳಿಸಿ ವರದಿಯನ್ನು ಗೃಹ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ.
ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಟಿ ಅವರ ವಿರುದ್ಧ ಸಂತ್ರಸ್ಥ ಮಹಿಳೆಯಿಂದಾಗಲಿ, ಮತ್ಯಾರಿಂದಾಗಲಿ ಸಹ ದೂರು ನೀಡಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಿದ ವಿಚಾರಣೆಯಲ್ಲಿ ಸೂಕ್ತ ಸಾಕ್ಷ್ಯಾಧಾರಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಮೇಟಿ ಅವರಿಗೆ ಕ್ಲೀನ್‌ಚಿಟ್ ನೀಡಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.
ಕಳೆದ ಡಿಸೆಂಬರ್‌ನಲ್ಲಿ ಸರ್ಕಾರಿ ಕಚೇರಿಯಲ್ಲಿಯೇ ಮಹಿಳೆಯೊಬ್ಬರೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದ ಸಿಡಿ ಬಿಡುಗಡೆಯಾಗಿತ್ತು. ಈ ಸಂಬಂಧ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.
loading...
No comments