ರಾಜ್ಯದಲ್ಲಿ ಕಾಂಗ್ರೆಸ್ ತುಘಲಕ್ ದರ್ಬಾರ್ ನಡೆಸುತಿದೆ : ಬಿ.ಎಸ್.ವೈ
ಹುಬ್ಬಳ್ಳಿ : ರಾಜ್ಯದಲ್ಲಿ ಅಂದಾದುಂದಿ ತುಘಲಕ್ ದರ್ಬಾರ್‌ದ ಖಜಾನೆ ಲೂಟಿ ಮಾಡುವ ಸರಕಾರ ಆಡಳಿತ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಆರೋಪಿಸಿದರು.
ಬರಗಾಲದ ಹಣವನ್ನು ಬಿಡುಗಡೆ ಮಾಡಲು ಈ ಸರಕಾರಕ್ಕೆ ಆಗುತ್ತಿಲ್ಲ. 10 ಸಾವಿರ ಕೋಟಿ ಹಣವನ್ನು ಬಿಡುಗಡೆ ಮಾಡದೇ ಬಾಕಿ ಉಳಿಸಿಕೊಂಡಿರುವ ಸರಕಾರ ಕೇವಲ ಖಜಾನೆ ಲೂಟಿಯಲ್ಲಿ ತೊಡಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ನಾನು ಹೋದಲೆಲ್ಲಾ ಗೋಶಾಲೆಗಳಿಗೆ ಭೇಟಿ ನೀಡುತ್ತಾ ಇದ್ದೇನೆ. ಆದರೆ ಸರಕಾರ ಕೇವಲ ಐದು ಕೆಜಿ ಮೇವು ವಿತರಣೆ ಮಾಡುತ್ತಿದೆ. ಈಗಲಾದರೂ ಮುಖ್ಯಮಂತ್ರಿಗಳು ಸರಿಯಾಗಿ ಮೇವು ವಿತರಿಸುವ ಕಾಯಕ್ಕೆ ಮುಂದಾಗಲಿ ಎಂದರು..
ಐ.ಎ.ಎಸ್.ಅಧಿಕಾರಿ ಅನುರಾಗ ಅನ್ಯಭಾಗ್ಯದಲ್ಲಿ ನಡೆದ ಅವ್ಯವಹಾರವನ್ನು ಬಯಲಿಗೆ ಎಳೆದ ಹಿನ್ನೆಲೆಯಲ್ಲಿ ಅವರಿಗೆ ಆ ಸ್ಥಿತಿ ಬಂದೊದಗಿತು. ಇದಕ್ಕೆ ಸರಕಾರವೇ ನೇರ ಹೊಣೆ ಎಂದು ಆಪಾದಿಸಿದರು.
ರಾಜ್ಯದಲ್ಲಿ ದಕ್ಷ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಸರಕಾರ ಸಂಪೂರ್ಣ ವಿಫಲವಾಗಿದೆ ಎಂದರು. ರಾಜ್ಯದಲ್ಲಿನ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳು ಕುಂಠಿತಗೊಂಡಿವೆ. ಇದಕ್ಕೂ ಸರಕಾರವೇ ಕಾರಣವೆಂದರು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಸಂಸದ ಪ್ರಹ್ಲಾದ ಜೋಶಿ, ಗೋವಿಂದ ಕಾರಜೋಳ, ಸಿ.ಟಿ.ರವಿ, ಮೇಯರ್ ಡಿ.ಕೆ.ಚವ್ಹಾಣ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಬಿಜೆಪಿ ಮುಖಂಡರಾದ ಬಾಳು ಮಗಜಿಕೊಂಡಿ ಮತ್ತಿತರರು ಈ ಸಂದರ್ಭದಲ್ಲಿದ್ದರು.
No comments