Breaking News

ಚುನಾವಣಾ ರಣತಂತ್ರ ರಾಜ್ಯ ಕಾಂಗ್ರೆಸ್ನಲ್ಲಿ ಬಿರುಸುಗೊಂಡ ಚಟುವಟಿಕೆ


ಬೆಂಗಳೂರು :ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ಎ.ಐ.ಸಿ.ಸಿ. ಪ್ರಧಾನ ಕಾರ್ಯದರ್ಶಿಯಾಗಿ, ಕೆ. ವೇಣುಗೋಪಾಲ್ ನೇಮಕಗೊಂಡ ನಂತರ ಚುನಾವಣಾ ಸಿದ್ಧತೆ, ಪಕ್ಷ ಸಂಘಟನೆ ಚಟುವಟಿಕೆಗಳು ಬಿರುಸು ಪಡೆದಿದ್ದು, ಇಂದಿನಿಂದ ಮತ್ತೆ ಕಾಂಗ್ರೆಸ್ ಪಕ್ಷದಲ್ಲಿ ಸರಣಿ ಸಭೆಗಳು ಆರಂಭವಾಗಿವೆ.

ರಾಜ್ಯ ಕಾಂಗ್ರೆಸ್‌ನ ಉಸ್ತುವಾರಿ ಹೊತ್ತಿರುವ ಕೆ. ವೇಣುಗೋಪಾಲ್ ಇಂದು ಮಧ್ಯಾಹ್ನ ನಗರಕ್ಕೆ ಆಗಮಿಸಿ, ಪ್ರದೇಶ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ವಿವಿಧ ಜಿಲ್ಲಾ ಮುಖಂಡರ ಸಭೆಯಲ್ಲಿ ಪಾಲ್ಗೊಂಡರು.

ಕಾಂಗ್ರೆಸ್‌ನ ಉಸ್ತುವಾರಿಯಾಗಿರುವ ಕೆ. ವೇಣುಗೋಪಾಲ್ 4 ದಿನ ರಾಜ್ಯದಲ್ಲಿ ವಾಸ್ತವ್ಯ ಹೂಡಿ ಪಕ್ಷದ ಸಂಘಟನೆ ಚುನಾವಣಾ ಸಿದ್ಧತೆಗೆ ಸಂಬಂಧಿಸಿದಂತೆ ಸಮಾಲೋಚನಾ ಸಭೆಗಳನ್ನು ನಡೆಸುವರು.

 ಚಿಕ್ಕಬಳ್ಳಾಪುರ, ಹಾಸನ, ಬಳ್ಳಾರಿ ಹಾಗೂ ಬಿಜಾಪುರ ಜಿಲ್ಲೆಗಳ ಮುಖಂಡರು, ಸಚಿವರು, ಶಾಸಕರ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಸ್ಥಳೀಯವಾಗಿ ಪಕ್ಷದಲ್ಲಿರುವ ಕೆಲ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಪಕ್ಷದ ಮೂಲಗಳು ಹೇಳಿವೆ.

No comments