Breaking News

ಇಬ್ಬರು ಪಾಕಿಸ್ತಾನ ಸೈನಿಕರ ಹತ್ಯೆಗೈದ ಭಾರತೀಯ ಸೇನೆ



ಜಮ್ಮು: ಜಮ್ಮು ಕಾಶ್ಮೀರದ ರಜೌರಿ ಮತ್ತು ಪೂಂಚ್‌ ಜಿಲ್ಲೆಯ ವ್ಯಾಪ್ತಿಯ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಭದ್ರತಾ ಪಡೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪ್ರತಿ ದಾಳಿ ನಡೆಸಿದ ಭಾರತೀಯ ಸೇನೆ ಪಾಕ್‌ನ ಇಬ್ಬರು ಸೈನಿಕರನ್ನು ಹತ್ಯೆಗೈದಿದೆ.


ಈಚಿನ ಮೂರು ದಿನಗಳಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ 10 ಬಾರಿ ಗುಂಡಿನ ದಾಳಿ ನಡೆಸಿದೆ. ಜನವರಿ ಒಂದರಿಂದ ಈಚೆಗೆ ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಒಟ್ಟು 14 ಬಾರಿ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ್ದು, ಒಬ್ಬ ನಾಗರಿಕ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ಪಾಕ್‌ ದಾಳಿಗೆ ಭಾರತೀಯ ಪಡೆ ಪ್ರತಿದಾಳಿ ನಡೆಸಿದ್ದು, ಭಿಂಬೊರೆ ಗಲಿ ವಲಯದಲ್ಲಿ ಇಬ್ಬರು ಪಾಕಿಸ್ತಾನ ಸೈನಿಕರನ್ನು ಹೊಡೆದುರುಳಿಸಿದೆ ಎಂದು ಸೇನೆ ಮೂಲಗಳು ತಿಳಿಸಿವೆ.

No comments