ಬಾಂಗ್ಲಾದೇಶವನ್ನು ಸದೆಬಡಿದು ಫೈನಲ್‌ಗೆ ಲಗ್ಗೆ ಇಟ್ಟ ಭಾರತ
ಬರ್ಮಿಂಗ್‌ಹ್ಯಾಮ್: ಐಸಿಸಿ ಚಾಂಪಿಯನ್ಸ್ ಟ್ರೋಫಿ 2017 ಏಕದಿನ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಗುರುವಾರ ಬಾಂಗ್ಲಾದೇಶ ವಿರುದ್ಧ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರ ಅಮೋಘ ಶತಕ (123*) ಹಾಗೂ ನಾಯಕ ವಿರಾಟ್ ಕೋಹ್ಲಿ ಅವರ ಆಕರ್ಷಕ ಅರ್ಧಶತಕದ (96*) ನೆರವಿನಿಂದ ಎಂಟು ವಿಕೆಟ್‌ಗಳ ಅಂತರದ ಅಧಿಕಾರಯುತ ಗೆಲುವು ದಾಖಲಿಸಿರುವ ಭಾರತ ತಂಡವು ಫೈನಲ್‌ಗೆ ಲಗ್ಗೆಯಿಟ್ಟಿದೆ.
ಭಾರತ ತಂಡ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.
ಬಾಂಗ್ಲಾದೇಶ ನೀಡಿದ 265 ರನ್ ಗುರಿಯನ್ನು ಬೆನ್ನತ್ತಿದ ಭಾರತ ತಂಡ ಕೇವಲ 40.1 ಓವರ್ಗಳಲ್ಲಿ 1 ವಿಕೆಟ್ ಕಳೆದುಕೊಂಡು 265 ರನ್ ಗಳಿಸುವ ಮೂಲಕ ಗೆಲುವಿನ ಗುರಿ ಮುಟ್ಟಿತು. ಭಾರತದ ಪರ ಇನಿಂಗ್ಸ್ ಆರಂಭಿಸಿದ ಶಿಖರ್ ಧವನ್ (46) ಮತ್ತು ರೋಹಿತ್ ಶರ್ಮಾ ಮೊದಲ ವಿಕೆಟ್ಗೆ 87 ರನ್ ಜತೆಯಾಟವಾಡಿ ತಂಡಕ್ಕೆ ಭದ್ರ ಬುನಾದಿ ಒದಗಿಸಿದರು. ಧವನ್ ಔಟಾದ ನಂತರ ಕ್ರೀಸ್ಗೆ ಇಳಿದ ವಿರಾಟ್ ಕೊಹ್ಲಿ ರೋಹಿತ್ ಶರ್ಮಾಗೆ ಉತ್ತಮ ಸಾಥ್ ನೀಡಿ ತಂಡವನ್ನು ಗೆಲುವಿನ ದಡ ಸೇರಿಸಿದರು.
No comments