Breaking News

ಕಾಶ್ಮೀರ ಭಾರತೀಯ ಸೇನಾ ಪಡೆಯ ಗುಂಡಿಗೆ ಮಸಣ ಸೇರಿದ ಇಬ್ಬರು ಉಗ್ರರು


ನವದೆಹಲಿ : ಕಾಶ್ಮೀರದ ಬಾರಾಮುಲ್ಲ ಜಿಲ್ಲೆಯಲ್ಲಿ  ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುರುವಾರ ಬೆಳಗಿನ ಜಾವ 3.30ರ ಸುಮಾರಿಗೆ ನಡೆದ ಗುಂಡಿನ ಕಾಳಗದಲ್ಲಿ  ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.


'ಸೊಪೋರ್‌ನ ನತಿಪೋರಾ ಗ್ರಾಮದಲ್ಲಿ ಉಗ್ರರು ಅಡಗಿರುವ ಬಗ್ಗೆ ದೊರೆತ ಮಾಹಿತಿಯನ್ನು ಆಧರಿಸಿ ಪೊಲೀಸ್‌ ಹಾಗೂ ಸೇನೆಯ 21 ರಾಷ್ಟ್ರೀಯ ರೈಫಲ್ಸ್‌ ಕೈಗೊಂಡ ಜಂಟಿ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರು ಹತರಾದರು. ಘಟನೆಯಲ್ಲಿ ನಾಲ್ವರು ಪೊಲೀಸರಿಗೆ ಗಾಯಗಳಾಗಿವೆ,' ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 ಸ್ಥಳದಲ್ಲಿ ಇನ್ನು ಹಲವು ಉಗ್ರರು ಅಡಗಿರುವ ಶಂಕೆ ಮೇರೆಗೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

No comments