Breaking News

ದಲಿತ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ಭಾಗ್ಯ : ಸಿದ್ದರಾಮಯ್ಯ


ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಗೆ ಇನ್ನುಮುಂದೆ ಉಚಿತ ಬಸ್ ಪಾಸ್ ಲಭ್ಯವಾಗಲಿದೆ .ವಿಧಾನಸೌಧದಲ್ಲಿಂದು ನಡೆದ 2017-18ನೇ ಸಾಲಿನ ಎಸ್‌ಟಿಪಿ ಮತ್ತು ಟಿಎಸ್‌ಪಿ ಉಪಯೋಜನೆಯ ವಿವಿಧ ಕ್ರಿಯಾ ಯೋಜನೆಯ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಶಿಷ್ಟ ಜಾತಿ ಮತ್ತು ವರ್ಗದ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡುವ ಯೋಜನೆಯನ್ನು ಪ್ರಕಟಿಸಿದರು.
ಪ್ರಸ್ತುತ ಶೇ. 25 ರಷ್ಟು ಹಣವನ್ನು ವಿದ್ಯಾರ್ಥಿಗಳು ಭರಿಸುತ್ತಿದ್ದು, ಸರ್ಕಾರ ಶೇ. 75 ರಷ್ಟು ರಿಯಾಯ್ತಿ ನೀಡುತ್ತಿದೆ. ಇನ್ನು ಮುಂದೆ ಈ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡುವಂತೆ ಮುಖ್ಯಮಂತ್ರಿ ಸೂಚನೆ ನೀಡಿದರು.

ಇದಕ್ಕಾಗಿ ಎಸ್‌ಇಪಿ ಮತ್ತು ಟಿಎಸ್‌ಪಿ ಯೋಜನೆಯಲ್ಲಿ 104 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಮೀಸಲಿಡಲಾಗುವುದು ಎಂದರು.

No comments