Breaking News

ಕೇಜ್ರಿವಾಲ್‌ ವಿರುದ್ಧ ಮೂರು ಎಫ್‌ಐಆರ್‌



ನವದೆಹಲಿ: ಲೋಕೋಪಯೋಗಿ ಇಲಾಖೆ(ಪಿಡಬ್ಲ್ಯುಡಿ) ಹರಗಣ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹಾಗೂ ಇತರರ ವಿರುದ್ಧ ಮೂರು ಪ್ರತ್ಯೇಕ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಕೋರ್ಟ್‌ಗೆ ತಿಳಿಸಿದೆ.
ಭ್ರಷ್ಟಾಚಾರ ವಿರೋಧಿ ಹೋರಾಟಗಾರ ರಾಹುಲ್ ಶರ್ಮಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಎಸಿಬಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್ ಕೋರ್ಟ್ ಈ ಮಾಹಿತಿ ನೀಡಿದೆ. ಮೇ 8ರಂದು ದೆಹಲಿ ಮುಖ್ಯಮಂತ್ರಿ ಹಾಗೂ ಇತರರ ವಿರುದ್ಧ ಮೂರು ಎಫ್ಐಆರ್ ದಾಖಿಸಲಾಗಿದೆ ಎಂದು ಎಸಿಬಿ ಹೇಳಿದೆ.

ರಸ್ತೆ ಗುತ್ತಿಗೆ ಮತ್ತು ಒಳಚರಂಡಿ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ದೆಹಲಿ ಮುಖ್ಯಮಂತ್ರಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಬೇಕೆಂದು ಕೋರಿ ರಾಹುಲ್ ಶರ್ಮಾ ಅವರು ಕೋರ್ಟ್ ಅರ್ಜಿ ಸಲ್ಲಿಸಿದ್ದರು.

No comments