Breaking News

ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು


ಮಂಗಳೂರು : ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿನಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ವಳಚ್ಚಿಲ್ ಎಂಬಲ್ಲಿ ನಡೆದಿದೆ. ಶ್ರೀನಿವಾಸ್ ಕಾಲೇಜ್‌ನ ಇಂಜಿನಿಯರಿಂಗ್ ಪ್ರಥಮ ವರ್ಷದ ವಿದ್ಯಾರ್ಥಿನಿ ನಿಧಿ(೧೯) ಸಾವಿಗೀಡಾದ ನತದೃಷ್ಟೆ.

ಮೊನ್ನೆ ತಡರಾತ್ರಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇಂಜಿನಿಯರಿಂಗ್ ವಿಭಾಗದ ಪ್ರಥಮಾರ್ಧ ವಾರ್ಷಿಕ ಫಲಿತಾಂಶ ಪ್ರಕಟಗೊಂಡಿದ್ದು, ಫಲಿತಾಂಶದಲ್ಲಿ ನಿರೀಕ್ಷಿತ ಶ್ರೇಣಿ ದೊರಕದ ಹಿನ್ನೆಲೆಯಲ್ಲಿ ನಿಧಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

No comments