Breaking News

ಕೇಂದ್ರಕ್ಕೆ ಅವಕಾಶ ಕೊಟ್ರೇ ಬರೀ 24 ಗಂಟೆಯಲ್ಲಿ ಕರಾವಳಿ ಶಾಂತ : ಸದಾನಂದ ಗೌಡಬೆಂಗಳೂರು: ರಾಜ್ಯ ಸರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾಗಿದೆ . ಕೇಂದ್ರಕ್ಕೆ ಕಾನೂನು ಸುವ್ಯವಸ್ಥೆ ಕಾಪಾಡಲು ಅವಕಾಶ ಕೊಟ್ಟರೆ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಗೆ ತರುತ್ತೇವೆ ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಬಹಿರಂಗ ಸವಾಲೆಸೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ದುಷ್ಕರ್ಮಿಗಳ ಕೃತ್ಯಕ್ಕೆ ಬಲಿಯಾಗಿದ್ದು, ಆ ಬಳಿಕ ಕರಾವಳಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿ ಸವಾಲು ಎಸೆದಿದ್ದಾರೆ.

No comments