Breaking News

ಕೆಜೆಪಿಗೆ ಗುಡ್ ಬೈ ಹೇಳಿದ ಧನಂಜಯ್ ಕುಮಾರ್ ಕಾಂಗ್ರೆಸ್ ಸೇರ್ಪಡೆ



ಬೆಂಗಳೂರು: ಮಂಗಳೂರಿನಿಂದ ಆಯ್ಕೆಯಾದ ಮೊತ್ತಮೊದಲ ಬಿಜೆಪಿ ಸಂಸದ ಎಂಬ ಹೆಗ್ಗಳಿಕೆಯ ಮಾಜಿ ಕೇಂದ್ರ ಸಚಿವ ವಿ.ಧನಂಜಯ ಕುಮಾರ್‌ ಕಾಂಗ್ರೆಸ್‌ ಸೇರಿದ್ದಾರೆ. ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂಧಿ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಸೇರಿದ್ದಾರೆ.
ಬಿಜೆಪಿಯಿಂದ 1983ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆ ಆದರು. ಬಳಿಕ 1991ರಲ್ಲಿ ಅಂದಿನ ಘಟಾನುಘಟಿ ರಾಜಕಾರಣಿ ಬಿ. ಜಾನಾರ್ದನ ಪೂಜಾರಿ ಅವರನ್ನು ಸೋಲಿಸಿ ಲೋಕಸಭೆಗೆ ಆಯ್ಕೆಯಾದ ಧನಝಯ್ ಕುಮಾರ್ ಬಳಿಕ ಮೂರು ಬಾರಿ ಮಂಗಳೂರು ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ನಾಲ್ಕು ಅವಧಿಗೆ ಲೋಕಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಬಿಜೆಪಿಯಲ್ಲಿ ಮೂಲೆಗುಂಪಾದ ಬಳಿಕ ಯಡಿಯೂರಪ್ಪ ಅವರ ಕರ್ನಾಟಕ ಜನತಾ ಪಾರ್ಟಿ ಸೇರಿದ್ದರು. ಅದಾದ ಬಳಿಕ ಜೆಡಿಎಸ್‌ ಸೇರ್ಪಡೆಗೊಂಡಿದ್ದರು. ಈಗ ಆ ಪಕ್ಷವನ್ನೂ ತ್ಯಜಿಸಿ ಕಾಂಗ್ರೆಸ್ ಸೇರಿದ್ದಾರೆ.

No comments