ಶರತ್ ಮಡಿವಾಳ ಕೊಲೆ ಪ್ರಕರಣ ರಾಜನಾಥ್ ಸಿಂಗ್ ಅವರನ್ನು ಖುದ್ದಾಗಿ ಭೇಟಿ ಮಾಡುತ್ತೇನೆ :ಬಿಎಸ್‍ವೈ
ಶರತ್ ಮಡಿವಾಳ ಮನೆಗೆ ಬಿ ಎಸ್ ವೈ ಭೇಟಿ
ಮಂಗಳೂರು : ಜುಲೈ ಮೊದಲ ವಾರದಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಮನೆಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪನವರು ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು
ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರನ್ನು ಹತ್ಯೆಗೈದ ನೈಜ ಕೊಲೆಗಡುಕರನ್ನು ಪೊಲೀಸರು ಪತ್ತೆ ಹಚ್ಚಬೇಕು. ಯಾವ ಕಾರಣಕ್ಕೂ ನಿರಪರಾಧಿಗಳಿಗೆ ಶಿಕ್ಷೆಯಾಗ ಬಾರದು ಅಭಿಪ್ರಾಯಪಟ್ಟರು.
ಒಂದು ವೇಳೆ ಪ್ರಕರಣದ ತನಿಖೆಗೆ ಅಡ್ಡಿಪಡಿಸಿದಲ್ಲಿ ಅಥವಾ ನಿರಪರಾಧಿಗಳಿಗೆ ಶಿಕ್ಷೆಯಾದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ ಅವರು, ಜಿಲ್ಲೆಯ ಪೊಲೀಸ್ ಅಧಿಕಾರಿಗಳು ರಾಜಕಾರಣಿಗಳ ಒತ್ತಡಕ್ಕೆ ಮಣಿಯಬಾರದು ಎಂದು ಹೇಳಿದರು.
ರಾಜ್ಯ ಸರ್ಕಾರದ ಒತ್ತಡದ ಕಾರಣ ಪ್ರಕರಣದ ತನಿಖೆ ಸೂಕ್ತ ರೀತಿಯಲ್ಲಿ ನಡೆಯುತ್ತಿಲ್ಲ ಘಟನೆ ಬಗ್ಗೆ ಖುದ್ದಾಗಿ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ರಾಷ್ಟ್ರೀಯ ತನಿಖಾ ದಳ ಅಥವಾ ಸಿಬಿಐ ತನಿಖೆಗೆ ಆಗ್ರಹಿಸುವುದಾಗಿ ತಿಳಿಸಿದರು.
ಈ ಸಂದರ್ಭ ಆರ್ ಎಸ್ ಎಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಶೋಭಾ ಕರಂದ್ಲಾಜೆ, ನಳೀನ್ ಕುಮಾರ್ ಕಟೀಲ್ ಮತ್ತು ಇನ್ನಿತರ ಬಿಜೆಪಿ ನಾಯಕರುಗಳು ಹಾಜರಿದ್ದರು.
No comments