Breaking News

ನಮ್ಮ ರಾಷ್ಟ್ರಪತಿ ಅಭ್ಯರ್ಥಿ ಸೋಲು ಖಚಿತ ಎಂದ ಪರಮೇಶ್ವರ್
 ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟದ ಅಭ್ಯರ್ಥಿ ಮೀರಾಕುಮಾರ್ ಸೋಲಬಹುದು. ಆದರೆ, ಸೈದ್ದಾಂತಿಕವಾಗಿ ಗೆಲುವು ಸಾಧಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
 ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ರಾಮಾನಾಥ್ ಕೋವಿಂದ್ ಮತಗಳ ಅಂತರದಲ್ಲಿ ಗೆಲುವು ಸಾಧಿಸಬಹುದು. ಆದರೆ, ನಾವು ಸೈದ್ದಾಂತಿಕವಾಗಿ ನಾವು ಗೆಲುವು ಸಾಧಿಸುತ್ತೇವೆ ಎಂದರು.
ಬಿಹಾರ್ ರಾಜ್ಯದ ಮಾಜಿ ರಾಜ್ಯಪಾಲರಾದ ರಾಮಾನಾಥ್ ಕೋವಿಂದ್, ಎನ್‌ಡಿಎ ಮೈತ್ರಿಕೂಟದಿಂದ ಸ್ಪರ್ಧಿಸಿರುವುದರಿಂದ ಗೆಲುವು ಬಹುತೇಕ ಖಚಿತವಾಗಿದೆ ಎಂದು ಮೂಲಗಳು ತಿಳಿಸಿವೆ.

No comments