ಬೀಳ್ಕೊಡುಗೆ ಸಮಾರಂಭದಲ್ಲಿ ಪ್ರಧಾನಿ ಮೋದಿಯನ್ನು ಹೊಗಳಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ನವದೆಹಲಿ: ನಿರ್ಗಮಿತಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನನ್ನ ಅಧಿಕಾರ ಅವಧಿಯಲ್ಲಿ ಕಾರ್ಯ ನಿರ್ವಹಿಸಲು ಬೆಂಬಲ ನೀಡಿದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.
ಸಂಸತ್ತಿನಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ ವೇಳೆ ವಿದಾಯ ಭಾಷಣ ಮಾಡಿದ ಪ್ರಣಬ್ ಮುಖರ್ಜಿ ಅವರು, ನನ್ನ ಅಧಿಕಾರವಧಿಯಲ್ಲಿ ನಾನು ಉತ್ತಮವಾಗಿ ಕಾರ್ಯನಿರ್ವಹಿಸಲು ಎಲ್ಲರೂ ಬೆಂಬಲಿಸಿದ್ದು ಸಂತಸ ತಂದಿದೆ. ಇನ್ನು ನನಗೆ ಅದ್ಧೂರಿ ಬೀಳ್ಕೊಡುಗೆ ನೀಡಿದವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.
ಇದೇ ವೇಳೆ ಮಾತನಾಡಿದ ಅವರು ಸಂಸತ್ತಿನಲ್ಲಿ ಜಿಎಸ್ಟಿಯನ್ನು ಅಂಗೀಕರಿಸಿರುವುದು ಪ್ರಬುದ್ಧತೆಯನ್ನು ತೋರಿಸುತ್ತದೆ. ಜಿಎಸ್ಟಿಗೆ ಅಂಗೀಕಾರ ಸಿಕ್ಕಿರುವುದು ದೇಶದ ಆಡಳಿತ ವ್ಯವಸ್ಥೆಯ ಒಗ್ಗಟ್ಟವನ್ನು ತೋರಿಸುತ್ತದೆ ಎಂದರು.
ಇನ್ನು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ನನ್ನ ವೃತ್ತಿ ಜೀವನಕ್ಕೆ ಮಾರ್ಗದರ್ಶನ ನೀಡಿದ ಅಪ್ರತಿಮ ನಾಯಕಿ. ಮೇರು ವ್ಯಕ್ತಿತ್ವ ಹೊಂದಿದ್ದ ಅವರು ನಿಜಕ್ಕೂ ಧೈರ್ಯ ಶಾಲಿಯಾಗಿದ್ದರು. ತುರ್ತು ಪರಿಸ್ಥಿತಿ ನಂತರ ಅಧಿಕಾರ ಕಳೆದುಕೊಂಡ ಇಂದಿರಾಗಾಂಧಿ ಅವರು 1978ರಲ್ಲಿ ಲಂಡನ್ ಗೆ ತೆರಳಿದ್ದಾಗ ಅಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಖಡಕ್ ಆಗಿ ಉತ್ತರಿಸಿದ್ದರು ಎಂದರು.
ಇನ್ನು ನಿಯೋಜಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜುಲೈ 25ರಂದು ಅದ್ಧೂರಿ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Source/online
No comments