Breaking News

ಶರತ್ ಮಡಿವಾಳ ಹತ್ಯೆ ಪ್ರಕರಣ ಇಬ್ಬರ ಬಂಧನ ?


ಮಂಗಳೂರು : ಜುಲೈ ಮೊದಲ ವಾರದಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣ ಸಂಬಂಧಿಸಿ ಇದೀಗ ಪೋಲಿಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ಪೋಲಿಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.


ಶರತ್ ಮಡಿವಾಳ ಕೊಲೆ ಪ್ರಕರಣದಲ್ಲಿ ಕೇರಳ ಮೂಲದವರ ಭಾಗಿಯಾಗಿ ಕೇರಳಕ್ಕೆ ಪರಾರಿಯಾಗಿದ್ದಾರೆ ಎಂಬ ಸುದ್ದಿ ಜಿಲ್ಲೆಯಲ್ಲಿ ಹಬ್ಬಿತ್ತು. ಬಲ್ಲ ಮೂಲಗಳ ಪ್ರಕಾರ ಬಂಧಿತ ಆರೋಪಿಗಳು ದಕ್ಷಿಣ ಕನ್ನಡ ಜಿಲ್ಲೆಯವರು ಅವರು ಆಗಿದ್ದು ಪೊಲೀಸರು ವಿವಿಧ ಆಯಾಮಗಳಿಂದ ತನಿಖೆಯನ್ನು ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹತ್ಯೆಯ ಹಿಂದೆ ಮರಳು ಮಾಫಿಯಾ ಕೈವಾಡ ಇದೆ ಎಂದು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಆ ನಿಟ್ಟಿನಲ್ಲಿ ಕೂಡ ತನಿಖೆ ಮಾಡಲು ಆಗುತ್ತಿದೆ. ಇನ್ನೂ ಕೆಲವು ದಿನಗಳಲ್ಲಿ ಶರತ್ ಮಡಿವಾಳ ಕೊಲೆ ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ಬಂಧಿಸುವ ವಿಶ್ವಾಸ ಪೊಲೀಸ್ ಇಲಾಖೆ ವ್ಯಕ್ತಪಡಿಸಿದೆ. 

1 comment:

  1. ನಿದ್ರಾಮಯ್ಯ ಇರುವವರೆಗೂ ಇದು ಸಾಧ್ಯವಿಲ್ಲ

    ReplyDelete