ರುಂಡ ಕತ್ತರಿಸಿಕೊಳ್ಳತ್ತೆನೆ ಅಂದ ಮರುದಿನವೇ ಜಮೀರ್ ಅಹಮ್ಮದ್ ಕಾಂಗ್ರೆಸ್ ಗೆ ಸೇರ್ಪಡೆ ?
ತುಮಕೂರು: ‘ನಾವು ಏಳು ಶಾಸಕರು ಕಾಂಗ್ರೆಸ್ ಪಕ್ಷ ಸೇರುವುದು ಖಚಿತ. ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಬಹಳ ದಿನಗಳ ಹಿಂದೆಯೇ ನೇರವಾಗಿ ಮಾತನಾಡಿದ್ದು, ಅವರೂ ಒಪ್ಪಿದ್ದಾರೆ’ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹಮ್ಮದ್ ಹೇಳಿದರು.
ಭಾನುವಾರ ನಗರದಲ್ಲಿ ಕಾಂಗ್ರೆಸ್ ಮುಖಂಡ ಎಚ್.ನಿಂಗಪ್ಪ ಅವರ ಮನೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್ ಅವರೊಂದಿಗೂ ಪಕ್ಷ ಸೇರುವ ಬಗ್ಗೆ ಮಾತನಾಡಿದ್ದೇವೆ’ ಎಂದರು.
‘ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್ ಅವರೊಂದಿಗೂ ಪಕ್ಷ ಸೇರುವ ಬಗ್ಗೆ ಮಾತನಾಡಿದ್ದೇವೆ’ ಎಂದರು.
‘ಜೆಡಿಎಸ್ ಪಕ್ಷವೇ ನಮ್ಮನ್ನೂ ಸರಿಯಾಗಿ ನಡೆಸಿಕೊಂಡಿಲ್ಲ. ಆ ಪಕ್ಷಕ್ಕೆ ಎಷ್ಟು ದುಡಿದರೂ ಪ್ರಯೋಜನವಿಲ್ಲ. ಹೀಗಾಗಿ, ಕಾಂಗ್ರೆಸ್ ಪಕ್ಷ ಸೇರುವ ನಿರ್ಧಾರ ತೆಗೆದುಕೊಂಡಿದ್ದೇವೆ. ನವೆಂಬರ್–ಡಿಸೆಂಬರ್ ತಿಂಗಳಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತೇವೆ’ ಎಂದು ಹೇಳಿದರು.
‘ಕಾಂಗ್ರೆಸ್ ಪಕ್ಷವೆಂದರೆ ಬದ್ಧತೆಯುಳ್ಳ ಪಕ್ಷವಾಗಿದೆ. ಮಾತುಕೊಟ್ಟಂತೆ ಪಕ್ಷದ ವರಿಷ್ಠರು, ಮುಖಂಡರು ನಡೆದುಕೊಳ್ಳುತ್ತಾರೆ. ಜೆಡಿಎಸ್ ಪಕ್ಷದಂತೆ ಸೂಟ್‌ಕೇಸ್ ಹಿಡಿದು ಬಂದವರಿಗೆ ಮಣೆ ಹಾಕುವುದಿಲ್ಲ’ ಎಂದು ಟೀಕಿಸಿದರು.
‘ಕಾಂಗ್ರೆಸ್ ಪಕ್ಷವೆಂದರೆ ಬದ್ಧತೆಯುಳ್ಳ ಪಕ್ಷವಾಗಿದೆ. ಮಾತುಕೊಟ್ಟಂತೆ ಪಕ್ಷದ ವರಿಷ್ಠರು, ಮುಖಂಡರು ನಡೆದುಕೊಳ್ಳುತ್ತಾರೆ. ಜೆಡಿಎಸ್ ಪಕ್ಷದಂತೆ ಸೂಟ್‌ಕೇಸ್ ಹಿಡಿದು ಬಂದವರಿಗೆ ಮಣೆ ಹಾಕುವುದಿಲ್ಲ’ ಎಂದು ಟೀಕಿಸಿದರು.
‘ವಿಧಾನಸಭಾ ಚುನಾವಣೆಗೆ ಚಾಮರಾಜಪೇಟೆಯಿಂದಲೇ ಶೇ 200ರಷ್ಟು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿಯೇ ಸ್ಪರ್ಧಿಸುತ್ತೇನೆ’ ಎಂದರು.
No comments