ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದ ಅಂಬರೀಷ್
ಬೆಂಗಳೂರು: ಮಾಜಿ ಸಚಿವ ಹಾಗೂ ನಟ ಅಂಬರೀಷ್ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾದ ಅಂಬರೀಷ್ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ .
ಎರಡು ದಿನಗಳ ಹಿಂದಷ್ಟೆ ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಆರೋಗ್ಯದ ಸಮಸ್ಯೆಯಿದ್ದ ಕಾರಣ ಅಂಬರೀಶ್ ವಿಧಾನಸೌಧಕ್ಕೆ ವ್ಹೀಲ್'ಚೇರ್ ಮೇಲೆ ಆಗಮಿಸಿ ಮತದಾನ ಮಾಡಿದ್ದರು. 2 ವರ್ಷಗಳ ಹಿಂದಷ್ಟೆ ಸಚಿವರಾಗಿದ್ದ ಸಂದರ್ಭದಲ್ಲಿ ಇದೇ ರೀತಿ ಆರೋಗ್ಯ ಸಮಸ್ಯೆ ಉಂಟಾಗಿ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು
No comments