ಕಲ್ಲಡ್ಕ ಪ್ರಭಾಕರ್ ಭಟ್ ಬಂಧಿಸುವಂತೆ ಹೇಳಿಲ್ಲ ಪ್ಲೇಟ್ ಬದಲಾಯಿಸಿದ ಸಿಎಂ
ದೊಡ್ಡಬಳ್ಳಾಪುರ: ಇಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ದಕ್ಷಿಣಕನ್ನಡ ಗಲಭೆ ಸಂಬಂಧ ಪಟ್ಟಂತೆ ಐಜಿ ಹರಿಶೇಖರನ್ ಸೇರಿ ಹಲವರನ್ನು ತರಾಟೆಗೆ ತೆಗೆದುಕೊಂಡಿದ್ದರು ಮತ್ತು ಕಲ್ಲಡ್ಕ ಪ್ರಭಾಕರ್ ಭಟ್ ಬಂಧನ ಮಾಡಲು ಸೂಚನೆ ನೀಡಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದಲ್ಲಿ 300 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಅವರನ್ನು ಬಂಧಿಸುವಂತೆ ನಾನು ಹೇಳಿಲ್ಲ. ಯಾರ ಹೆಸರನ್ನೂ ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಕೋಮುಗಲಭೆ ಸೃಷ್ಟಿಸುವ ಸಂಘಟನೆ ಹಾಗೂ ಕೋಮುಗಲಭೆ ಸೃಷ್ಠಿಸುವ ಪ್ರಚೋದನಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಅವರು ಹೇಳಿದರು.
No comments