ಶರತ್ ಶವಯಾತ್ರೆಯಲ್ಲಿ ಕಲ್ಲು ತೂರಾಟದ ಸ್ಟೋಟಕ ಮಾಹಿತಿ
ಮಂಗಳೂರು : RSS ಕಾರ್ಯಕರ್ತ ಶರತ್ ಅವರ ಪಾರ್ಥಿವ ಶರೀರವನ್ನು ಇಂದು ಎಜೆ ಆಸ್ಪತ್ರೆಯಿಂದ ಮೃತರ ಸ್ವಗ್ರಾಮಕ್ಕೆ ಮೆರವಣಿಗೆ ಮೂಲಕ ತೆಗೆದು ಕೊಂಡು ಹೋಗುವ ಸಂದರ್ಭ ಕೈಕಂಬ ಬಳಿ ಬರುತ್ತಿದ್ದಂತೆ ಅಕ್ಕಪಕ್ಕದ ಕಟ್ಟಡಗಳಲ್ಲಿ ಅವಿತಿದ್ದ ಮುಸ್ಲಿಂ ಯುವಕರ ಗುಂಪು ಕಲ್ಲು ತೂರಾಟ ನಡೆಸಿದ್ದಾರೆ.ಈ ಘಟನೆ ಸಂಬಂಧಿಸಿದಂತೆ ಪೊಲೀಸರು ಶವಯಾತ್ರೆ ವೇಳೆ ಕಲ್ಲು ತೂರಾಟದಲ್ಲಿ ಭಾಗಿಯಾದ ಕೈಕಂಬದ 13 ಜನರನ್ನೂ ಪೊಲೀಸರು ಬಂಧಿಸಿದ್ದು , ಆಘಾತಕಾರಿ ವಿಚಾರ ಎಂದರೆ ಬಂಧಿತರಲ್ಲಿ ಮೂರು ಜನ ಕೇರಳ ಮೂಲದವರು ಎಂದು ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ.
ಬಿ.ಸಿ.ರೋಡಿನ ಗಲಭೆಗೆ ಪೂರ್ವಯೋಜಿತ ಕೃತ್ಯವಾಗಿದ್ದು ಇಂದು ಬಂಟ್ವಾಳದಲ್ಲಿ ಯಾವುದೇ ಶಾಂತಿ ಸಭೆ ಇಲ್ಲ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದೇವೆ ಎಂದು ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ .
No comments