ಎಲ್‌ಇಟಿ ಕಮಾಂಡರ್ ಸೇರಿ ಮೂವರು ಉಗ್ರರು ಮಟಾಷ್
ಅನಂತ್ ನಾಗ್ ಜಿಲ್ಲೆಯ ದೈಲ್ಗಾಂ ಗ್ರಾಮದಲ್ಲಿ ಕಟ್ಟಡವೊಂದರಲ್ಲಿ ಅವಿತಿದ್ದ ಉಗ್ರರಿಗಾಗಿ ನಡೆಯುತ್ತಿರುವ ಕಾರ್ಯಾಚರಣೆ ನಿರ್ಣಾಯಕ ಹಂತ ತಲುಪಿದ್ದು, ಈ ವರೆಗೂ ಕಟ್ಟಡದಲ್ಲಿ ಅವಿತಿದ್ದ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಹತರಾದ ಉಗ್ರರ ಪೈಕಿ ಓರ್ವ ಉಗ್ರ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ ಮುಖಂಡ ಬಷೀರ್ ಲಷ್ಕರಿ ಎಂದು ಗುರುತಿಸಲಾಗಿದೆ. ಅಂತೆಯೇ ಎನ್ ಕೌಂಟರ್ ನಲ್ಲಿ ಓರ್ವ ಮಹಿಳೆ ಕೂಡ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
No comments