ದಕ್ಷಿಣ ಕನ್ನಡ ಗಲಭೆಗೆ ಕಾರಣ ಶೋಭಾ ಕರಂದ್ಲಾಜೆ : ರಮಾನಾಥ್ ರೈ
ಬೆಂಗಳೂರು: ಮಂಗಳೂರಿನಲ್ಲಿ ನಡೆಯುತ್ತಿರುವ ಕೋಮು ಗಲಭೆಗೆ ಸಂಸದೆ ಶೋಭಾ ಕರಂದ್ಲಾಜೆ ಅವರೇ ಕಾರಣ ಎಂದು ಅರಣ್ಯ ಸಚಿವ ರಮಾನಾಥ ರೈ ವಾಗ್ದಾಳಿ ನಡೆಸಿದ್ದಾರೆ.
ಇನ್ನು ಗಲಭೆ ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣವಿಫಲವಾಗಿದೆ. ಕರಾವಳಿಯಲ್ಲಿ ಗಲಭೆ ಸೃಷ್ಟಿಯ ಹಿಂದೆ ಈ ಭಾಗದ ಸಚಿವರ ಕೈವಾಡವಿದೆ ಎಂದು ಬಿಜೆಪಿ ಗಂಭೀರ ಆರೋಪಿಸಿದೆ.ಗಲಭೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವ ಬದಲು ರಾಜಕೀಯ ಪಕ್ಷಗಳ ಕೆಸರೆರಚಾಟ ಮುಂದುವರಿದಿದೆ.
ಇತ್ತ ಮತೀಯವಾದ ಬಿತ್ತಿದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.
No comments