ವಿದ್ಯಾರ್ಥಿಗಳಿಗೆ ಸಿಗಲಿದೆ ಕೊಬ್ಬರಿ ಎಣ್ಣೆ, ಸಾಬೂನು, ಪೇಸ್ಟ್ ಕಿಟ್
ಬೆಂಗಳೂರು: ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಅಧೀನದ ಶಾಲೆ ವಿದ್ಯಾರ್ಥಿಗಳಿಗೆ ಕೊಬ್ಬರಿ ಎಣ್ಣೆ, ಸಾಬೂನು, ಟೂತ್ ಪೇಸ್ಟ್ ಸಹಿತ ನಿರ್ಮಲ ಮತ್ತು ಸ್ಫೂರ್ತಿ ಕಿಟ್ ವಿತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ.
ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಯೋಜನೆಗೆ 15.70 ಕೋಟಿ ರೂ. ಅನುದಾನ ನೀಡಲಿದ್ದು, 6 ರಿಂದ 10 ತರಗತಿವರೆಗೆ ಓದುವ 1.25 ಲಕ್ಷ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಸಂಪುಟ ಸಭೆ ಬಳಿಕ ಮಾಧ್ಯಮಗಳಿಗೆ ವಿವರಿಸಿದರು.
vk
No comments