ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಎಂ.ವೆಂಕಯ್ಯ ನಾಯ್ಡು
ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಎಂ.ವೆಂಕಯ್ಯ ನಾಯ್ಡು ಅವರನ್ನು ಆಯ್ಕೆ ಮಾಡಲಾಗಿದೆ.ಈ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸೋಮವಾರ ಸಂಜೆ ಬಿಜೆಪಿಯ ಸಂಸದೀಯ ಮಂಡಳಿ ಸಭೆ ಸೇರಿ ವೆಂಕಯ್ಯ ನಾಯ್ಡು ಅವರನ್ನು ಆಯ್ಕೆ ಮಾಡಲಾಗಿದೆ.ವೆಂಕಯ್ಯ ನಾಯ್ಡು ಅವರು ಸದ್ಯ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಖಾತೆ ನಿರ್ವಹಿಸುತ್ತಿದ್ದಾರೆ. ಆಗಸ್ಟ್ 05ರಂದು ಚುನಾವಾಣೆ ನಡೆಯಲಿದೆ.
Venkaiah Naidu named NDA's Vice Presidential candidate
— ANI Digital (@ani_digital) July 17, 2017
Read @ANI_news story | https://t.co/eHTsaQncW7 pic.twitter.com/WR28tGF1bU
No comments