Breaking News

ಕಮ್ಯೂನಿಸ್ಟ್ ವತಿಯಿಂದ ನಾಳೆ ವಿಧಾನಸೌಧ ಚಲೋ



ಬೆಂಗಳೂರು : ಸರ್ಕಾರಿ ಜಾಗಗಳಲ್ಲಿ ವಾಸಿಸುವ ಜನರಿಗೆ ಹಕ್ಕುಪತ್ರ ಹಾಗೂ ನಿವೇಶನ ರಹಿತರಿಗೆ ನಿವೇಶನ ನೀಡಬೇಕು ಎಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ ಹಾಗೂ ಬಿಡುಗಡೆಯ ಚಿರತೆಗಳು ಸಂಘಟನೆಗಳ ವತಿಯಿಂದ ಜು.೧೦ರಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ.
ರಾಜ್ಯ ಸರ್ಕಾರ ೪೧ ಸಾವಿರ ಸರ್ಕಾರಿ ಜಮೀನನ್ನು ಒತ್ತುವರಿದಾರರಿಂದ ತೆರವು ಮಾಡಿದೆ. ಬಡವರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದ್ದರೆ ವಶಪಡಿಸಿಕೊಂಡಿರುವ ಈ ಭೂಮಿಯನ್ನು ನಿವೇಶನರಹಿತರಿಗೆ ಒದಗಿಸಬೇಕು. ೩೦-೪೦ ವರ್ಷಗಳಿಂದ ಸರ್ಕಾರಿ ಜಾಗಗಳಲ್ಲಿ ವಾಸ ಮಾಡುವ ಜನರಿಗೆ ಹಕ್ಕುಪತ್ರ ವಿತರಣೆ ಮಾಡಬೇಕು. ಅನೇಕ ವರ್ಷಗಳಿಂದ ಉಳುಮೆ ಮಾಡಿ ಜೀವನ ಸಾಗಿಸುತ್ತಿರುವ ರೈತರನ್ನು ಒಕ್ಕಲೆಬ್ಬಿಸುವುದನ್ನು ಕೈಬಿಡಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಲಾಗಿದೆ.
ನಾಳೆ ಬೆಳಿಗ್ಗೆ ೧೦ ಗಂಟೆಗೆ ಪುರಭವನದಿಂದ ವಿಧಾನಸೌಧ ಚಲೋ ನಡೆಯಲಿದೆ ಎಂದು ತಿಳಿಸಲಾಗಿದೆ.

No comments