Breaking News

ಐಟಿ ದಾಳಿ ವೇಳೆ ನಿಷೇಧಿತ 1000 ಹಾಗೂ 500 ನೋಟು ಪತ್ತೆ ಸಂಕಷ್ಟದಲ್ಲಿ ಡಿಕೆಶಿಬೆಂಗಳೂರು : ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಕಚೇರಿ, ನಿವಾಸ ಹಾಗೂ ಆಪ್ತರು ಹಾಗೂ ಸಂಬಂಧಿಕರ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದೂ ಕೂಡ ಮುಂದುವರೆಸಿದ್ದು ದಾಳಿಯನ್ನು ತೀವ್ರಗೊಳಿಸಿದ್ದು, ಅಪಾರ ಪ್ರಮಾಣದ ನಗದು ಹಾಗೂ ಮಹತ್ವದ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದು,ನಿಷೇಧಿತ 1000 ಹಾಗೂ 500 ಮುಖಬೆಲೆಯ ನೋಟು ಪತ್ತೆಯಾಗಿದೆ  ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಮಧ್ಯಪ್ರವೇಶಿಸುವ ಎಲ್ಲಾ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ .

ನಿಷೇಧಿತ ನೋಟು ಪತ್ತೆ

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಡಿ.ಕೆ. ಶಿವಕುಮಾರ್ ಮಾಲೀಕತ್ವದ ನ್ಯಾಷನಲ್‌ ಹಿಲ್ ವ್ಯೂ ಪಬ್ಲಿಕ್ ಶಾಲೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಅಲ್ಲಿ ನಿಷೇಧಿತ 500 ಹಾಗೂ 1000 ಮುಖಬೆಲೆಯ ನೋಟುಗಳು ಪತ್ತೆಯಾಗಿರುವುದು ಶಿವಕುಮಾರ್ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಈಗಾಗಿ ದಾಳಿಯನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇನ್ನಷ್ಟು ಚುರುಕುಗೊಳಿಸಿದ್ದು, ನಿಷೇಧಿತ ನೋಟು ಪತ್ತೆ ಹಾಗೂ ಅಕ್ರಮ ಆಸ್ತಿ-ಪಾಸ್ತಿ ಹಾಗೂ ಹಣದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.No comments