Breaking News

2018ರ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಎಸ್ ಯಡಿಯೂರಪ್ಪ ಅಧಿಕೃತ ಘೋಷಣೆ ಮಾಡಿದ ಅಮಿತ್ ಶಾ



2018 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಈಗಲೇ ಎಲ್ಲ ಪಕ್ಷಗಳು ಕಾರ್ಯತಂತ್ರವನ್ನು ರೂಪಿಸಿ ಅಗ್ನಿಪರೀಕ್ಷೆಗೆ ತಯಾರಾಗುತ್ತಿದ್ದಾರೆ. ಬಿಜೆಪಿ ಪಕ್ಷ ಕೂಡ ಅವರ ಮುಂದಿನ ಯೋಜನೆಗಳ ಕುರಿತಾಗಿ ಚರ್ಚೆಗಳನ್ನು ಪ್ರಾರಂಭ ಮಾಡಿದೆ. ಪ್ರಮುಖವಾಗಿ ಬಿಜೆಪಿ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಬಹಳವಾಗಿ ಕೇಳಿಬರುತ್ತಿತ್ತು.
ಬಿ ಎಸ್ ಯಡಿಯೂರಪ್ಪನವರು ಒಂದು ಬಾರಿ ಉಪಮುಖ್ಯಮಂತ್ರಿಯಾಗಿಯೂ, ಎರಡು ಬಾರಿ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರ ಕಾರ್ಯಕ್ಷೇತ್ರವಾದ ಶಿವಮೊಗ್ಗದ ಅಭಿವೃದ್ದಿಗೆ ಮೂಲ ಕಾರಣ ಯಡಿಯೂರಪ್ಪನವರೇ ಆಗಿದ್ದಾರೆ.
ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬುದೆಂಬುದು ಬಿಜೆಪಿ ಪಕ್ಷದಲ್ಲಿ ಅಷ್ಟೇ ಅಲ್ಲದೇ ಸಾಮಾನ್ಯ ಜನರಲ್ಲೂ ಗೊಂದಲವನ್ನು ಮೂಡಿಸಿತ್ತು. ಈ ವಿಷಯಕ್ಕೆ ಸಂಬಂಧಪಟ್ಟಂತೆ ಉಂಟಾಗಿದ್ದ ಗೊಂದಲಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಷಾ ಅವರು ತೆರೆ ಎಳೆದಿದ್ದಾರೆ. ಮೂರು ದಿವಸಗಳ ಕಾಲ ಪಕ್ಷ ಸಂಘಟನೆಗಾಗಿ ಕರ್ನಾಟಕ ರಾಜ್ಯಕ್ಕೆ ಆಗಮಿಸಿರುವ ಅಮಿತ್ ಷಾ, ಮುಂದಿನ ಮುಖ್ಯಮಂತ್ರಿ ಕರ್ಣಾಟಕದ ಬಿಜೆಪಿ ಪಕ್ಷದ ಅಧ್ಯಕ್ಷರಾದ ಬಿ ಎಸ್ ಯಡಿಯೂರಪ್ಪ ಎಂದು ಘೋಷಿಸಿದರು.
ಇದೇ ವೇಳೆ ಪಕ್ಷದಲ್ಲಿರುವ ಸಮಸ್ಯೆಗಳನ್ನು ನಿವಾರಿಸಿ, ಕಾರ್ಯಕರ್ತರನ್ನು ಸಜ್ಜುಗೊಳಿಸುವ ಕೆಲಸ ಮಾಡುವ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಬೇಕಾಗಿದೆ ಎಂದೂ ಅವರು ಹೇಳಿದರು. ವಿವಿಧ ಸಂಸ್ಥೆಗಳು ಮಾಡಿದ ಸಮೀಕ್ಷೆಗಳ ವರದಿಯನ್ನೂ ಅಮಿತ್ ಶಾ ಅವರು ಮಂಡಿಸಲಿದ್ದಾರೆ. ಈ ವರದಿಯನ್ನು ಆಧರಿಸಿ ಮುಂದಿನ ಚುನಾವಣೆಯ ತಯಾರಿಯ ರೂಪುರೇಷೆಗಳನ್ನು ಸಿದ್ದಪಡಿಸಲಿದ್ದಾರೆ.

No comments