ಬಿಜೆಪಿ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯ ಅವರನ್ನು ಜೈಲಿಗೆ ಅಟ್ಟುತ್ತೇನೆ :ಬಿಎಸ್‌ವೈ
ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಂಚ ಪ್ರಕರಣದಲ್ಲಿ ಸೆಂಟ್ರಲ್ ಜೈಲು ಸೇರಲಿದ್ದಾರೆ ಎಂದು ಬಿಜೆಪಿ ಮುಖಂಡ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು
'ನನ್ನ ವಿರುದ್ಧ ನೂರು ಕೇಸ್ ಇದ್ದರೂ ಕೇರ್ ಮಾಡುವುದಿಲ್ಲ, ಹೋರಾಟ ನಡೆಸುತ್ತೇನೆ,'ಎಂದು ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದರು.
ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಹಲವಾರು ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
No comments