Breaking News

ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರು ಹುತಾತ್ಮ

ಕಾಶ್ಮೀರ : ಕಾಶ್ಮೀರದ ಶೋಪಿಯನ್‌ ಜಿಲ್ಲೆಯಲ್ಲಿ ಗುರುವಾರ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆ ಮೇಜರ್‌ ಮತ್ತು ಜವಾನ್‌ ಹುತಾತ್ಮರಾಗಿದ್ದಾರೆ ಎಂದು ವರದಿ ಆಗಿದೆ. 

ಝೈಪೊರಾ ವಲಯದಲ್ಲಿ ಭಾರತೀಯ ಸೇನೆ ಬುಧವಾರ ರಾತ್ರಿ ಉಗ್ರರ ವಿರುದ್ಧದ ಕಾರ್ಯಾಚರಣೆ ನಡೆಸುತ್ತಿತ್ತು. ಈ ವೇಳೆ ಉಗ್ರರು ಸೇನೆಯ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದರು.ದಾಳಿಯಲ್ಲಿ ಮೂರು ಮಂದಿ ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂವರ ಪೈಕಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಮತ್ತೊಬ್ಬ ಯೋಧರ ಪರಿಸ್ಥಿತಿ ಗಂಭೀರವಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. 
 - Ani 


No comments