Breaking News

ಡೆಲ್ಲಿ ಪಬ್ಲಿಕ್ ಶಾಲೆಯಲ್ಲಿ ಚೀನಾದ ಹೊಸ ವರ್ಷಾಚರಣೆ ಕಾರ್ಯಕ್ರಮ ರದ್ದು
ಬೆಂಗಳೂರು :ನಗರದಲ್ಲಿರುವ ಡೆಲ್ಲಿ ಪಬ್ಲಿಕ್ ಶಾಲೆಯಲ್ಲಿ ನಾಳೆ ನಡೆಯಬೇಕಿದ್ದ ಚೀನಾದ ಹೊಸ ವರ್ಷಚರಣೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
ಕಾರ್ಯಕ್ರಮ ಕುರಿತು ಆಗಸ್ಟ್ ೩ ರಂದು ಸುತ್ತೋಲೆ ಹೊರಡಿಸಲಾಗಿತ್ತು. ಮಕ್ಕಳು ಚೀನಿ ಬಟ್ಟೆ ಹಾಕಿಕೊಂಡು ಬರುವಂತೆ ಮತ್ತು ಯಾವುದಾದರೊಂದು ಚೀನಾ ಆಹಾರ ತರಬೇಕೆಂದು ಸುತ್ತೋಲೆಯಲ್ಲಿ ಹೇಳಿತ್ತು. ಈ ಆಚರಣೆ ಎಲ್ಲೆಡೆ ತೀವ್ರ ವಿವಾದಕ್ಕೆ ಕಾರಣವಾಗಿತ್ತು.

ಶಾಲೆಯ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಕಾರ್ಯಕ್ರಮ ರದ್ದುಪಡಿಸಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ನಾರಾಯಣ್ ಸೂಚನೆ ಮೇರೆಗೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ಮಂಜು ಸುಬ್ರಹ್ಮಣ್ಯ ರದ್ದುಪಡಿಸಿದ್ದಾರೆ. ಸ್ಥಳಕ್ಕೆ ಬಾಗಲೂರು ಪೊಲೀಸರು ಭೇಟಿ ನೀಡಿಪರಿಶೀಲನೆ ನಡೆಸಿದ್ದಾರೆ.

No comments