ಅಕ್ರಮ ಗೋಸಾಗಾಟ ಪತ್ತೆ ಗೋ ಕಳ್ಳರು ಪರಾರಿ
ಮಂಗಳೂರು : ಪಿಕಪ್ ವಾಹನದಲ್ಲಿ ಅಕ್ರಮವಾಗಿ ೨೨ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಸುರತ್ಕಲ್ ಪೊಲೀಸರು ಪತ್ತೆ ಹಚ್ಚಿದ ಘಟನೆ ಇಲ್ಲಿನ ಮುಕ್ಕ ಚೆಕ್ ಪೋಸ್ಟ್ ಬಳಿ ಇಂದು ಮುಂಜಾನೆ ನಡೆದಿದೆ. ಆದರೆ ಪಿಕಪ್ ವಾಹನದಲ್ಲಿದ್ದ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಜಾನುವಾರು ಸಾಗಿಸಲಾಗುತ್ತಿತ್ತು. ಈ ವೇಳೆ ಮುಕ್ತ ಚೆಕ್‌ಪೋಸ್ಟ್ ಬಳಿ ಸುರತ್ಕಲ್ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಪಿಕಪ್‌ನಲ್ಲಿದ್ದ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ. ಪಿಕಪ್ ವಾಹನದಲ್ಲಿ ೨೨ ವಾಹನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸಲಾಗುತ್ತಿತ್ತು. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಾರಿಯಾಗಿರುವ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
No comments