ಕುಳಾಯಿ ಮೀನುಗಾರಿಕಾ ಬಂದರು ನಿರ್ಮಾಣಕ್ಕೆ ಅನುದಾನ ಬಿಡುಗಡೆ
ನವದೆಹಲಿ : ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಇವರ ನೇತೃತ್ವದಲ್ಲಿ ಮೀನುಗಾರಿಕಾ ರಂಗದ ಪದಾಧಿಕಾರಿಗಳ ನಿಯೋಗವು ಸ್ಥಗಿತಗೊಂಡಿರುವ ಮಂಗಳೂರು ಮೀನುಗಾರಿಕಾ ಬಂದರಿನ ೩ನೇ ಹಂತದ ಯೋಜನೆಗೆ ರೂ.೩೨.೨೦ ಕೋಟಿ ಅನುದಾನವನ್ನು ಕೇಂದ್ರ ಸರಕಾರದಿಂದ ಬಿಡುಗಡೆ ಮಾಡುವಂತೆ ಮಾನ್ಯ ಕೇಂದ್ರ ಕೃಷಿ ಸಚಿವರಾದ ರಾಧಾಮೋಹನ್ ಸಿಂಗ್ ಇವರನ್ನು ಆ.೮ ರಂದು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.
ನಿಯೋಗದಲ್ಲಿ ಮಂಗಳೂರು ಟ್ರಾಲ್ ಬೋಟ್ ಮೀನುಗಾರರ ಸಂಘದ ಅಧ್ಯಕ್ಷರಾದ ಶ್ರೀ.ನಿತಿನ್ ಕುಮಾರ್, ಕರ್ನಾಟಕ ಪರ್ಸಿನ್ ಬೋಟ್ ಮೀನುಗಾರರ ಸಂಘದ ಅಧ್ಯಕ್ಷರಾದ ಮೋಹನ್ ಬೆಂಗ್ರೆ, ಕರ್ನಾಟಕ ಕರಾವಳಿ ಮೀನುಗಾರರ ಕ್ರೀಯಾ ಸಂಘದ ಅಧ್ಯಕ್ಷರಾದ ಮನೋಹರ್ ಬೋಳೂರು, ಮೀನುಗಾರ ಪ್ರಮುಖರಾದ ಅನಿಲ್ ಕುಮಾರ್, ಇಬ್ರಾಹಿಂ ಬೆಂಗ್ರೆ, ನವೀನ್ ಬಂಗೇರ, ಬಾಬು ಉಳ್ಳಾಲ್, ದಯಾನಂದ ಇವರು ಉಪಸ್ಥಿತರಿದ್ದರು.
ಇದಲ್ಲದೇ ಸಂಸದ ನಳಿನ್ ಕುಮಾರ್ ಕಟೀಲ್ ಇವರ ಸತತ ಪ್ರಯತ್ನದ ಫಲವಾಗಿ ನವಮಂಗಳೂರು ಮೀನುಗಾರಿಕಾ ಬಂದರಿನ ನಿರ್ವಸಿತರ ಬಹುಕಾಲದ ಬೇಡಿಕೆಯಾಗಿದ್ದ ಕುಳಾಯಿ ಮೀನುಗಾರಿಕಾ ಬಂದರು ನಿರ್ಮಾಣ ಯೋಜನೆಗೆ ಕೇಂದ್ರ ಸರಕಾರವು ಅನುಮೋದನೆ ನೀಡಿ ರೂ.೧೯೬.೦೦ ಕೋಟಿ ಅನುದಾನ ಬಿಡುಗಡೆಗೊಳಿಸಿದೆ.
No comments