ರೇಷನ್ ಅಂಗಡಿಗಳಲ್ಲಿ ವಿದ್ಯುತ್ ಬಿಲ್ ಕಟ್ಟಬಹುದು , ಬಸ್, ರೈಲು,ವಿಮಾನ ಟಿಕೆಟ್ ಕಾಯ್ದಿರಿಸಬಹುದು!
ಬೆಂಗಳೂರು: ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ಇನ್ನು ಮುಂದೆ ವಿದ್ಯುತ್ ಬಿಲ್ ಪಾವತಿ, ಮೊಬೈಲ್ ರೀಜಾರ್ಜ್, ಬಸ್, ರೈಲು ಮತ್ತು ವಿಮಾನ ಟಿಕೆಟ್ ಕಾಯ್ದಿರಿಸುವ ಸೇವೆ ಸಾರ್ವಜನಿಕರಿಗೆ ಲಭ್ಯ ಆಗಲಿದೆ.
ಕಂಪ್ಯೂಟರ್ ಸೌಲಭ್ಯಗಳಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಇ– ಆಡಳಿತ ಇಲಾಖೆ ಈ ಸೇವೆ ಆರಂಭಿಸಲು ಮುಂದಾಗಿದೆ. ಮೊದಲ ಹಂತದಲ್ಲಿ ಕೆಲವು ಅಂಗಡಿಗಳನ್ನು ಆಯ್ಕೆ ಮಾಡಲಾಗಿದೆ. ಜನನ, ಮರಣ ಪ್ರಮಾಣ ಪತ್ರ ಮತ್ತಿತರ ಸೌಲಭ್ಯಗಳನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಒದಗಿಸಲಾಗುವುದು.
ರಾಜ್ಯದ ಆರು ಸಾವಿರಕ್ಕೂ ಹೆಚ್ಚು ನ್ಯಾಯಬೆಲೆ ಅಂಗಡಿಗಳಲ್ಲಿ ಕಂಪ್ಯೂಟರ್ ಸೌಲಭ್ಯ ಇದೆ. ಈ ಬಗ್ಗೆ ಇ– ಆಡಳಿತ ಇಲಾಖೆಗೆ ಮಾಹಿತಿ ನೀಡಲಾಗಿದೆ’ ಎಂದು ಆಹಾರ ಇಲಾಖೆ ಹಿರಿಯ ಉಪ ನಿರ್ದೇಶಕ ಗಂಗಾಧರ ತಿಳಿಸಿದ್ದಾರೆ.
No comments