ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ ಆರೋಪಿಗಳಿಗೆ ಜಾಮೀನು ನೀಡಲು ಸುಪ್ರೀಂ ನಿರಾಕರಣೆ
ನವದೆಹಲಿ: ಉಡುಪಿ ಜಿಲ್ಲೆಯ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್ ಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ.
ಕೊಲೆ ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೆ ಜಾಮೀನು ನೀಡಲು ಸುಪ್ರೀಂ ಪೀಠ ನಿರಾಕರಿಸಿದ್ದು, ಆರು ತಿಂಗಳೊಳಗೆ ತನಿಖೆ ಪೂರ್ಣಗೊಳ್ಳದಿದ್ದರೆ ಮತ್ತೆ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ಆರೋಪಿಗಳಿಗೆ ಸೂಚಿಸಿದೆ.
ಕಳೆದ ವರ್ಷ ಜುಲೈ 28ರಂದು ಉದ್ಯಮಿ ಭಾಸ್ಕರ ಶೆಟ್ಟಿ ಅವರನ್ನು ಹೋಮಕುಂಡದಲ್ಲಿ ಸುಟ್ಟು ಹತ್ಯೆಗೈಯಲಾಗಿತ್ತು. ಈ ಪ್ರಕರಣದಲ್ಲಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ನಿರಂಜನ್ ಭಟ್ ನನ್ನು ಪೊಲೀಸರು ಬಂಧಿಸಿದ್ದರು. ಜಾಮೀನಿಗಾಗಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು, ಆದರೆ ಹೈಕೋರ್ಟ್ ಕೂಡಾ ಅರ್ಜಿಯನ್ನು ವಜಾಗೊಳಿಸಿತ್ತು.
No comments