Breaking News

ಉಪರಾಷ್ಟ್ರಪತಿ ಆಗಿ ವೆಂಕಯ್ಯ ಆಯ್ಕೆ ಖಚಿತ



ನವದೆಹಲಿ : ಉಪರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಸಂಸದರು ಶನಿವಾರ ಮತ ಚಲಾಯಿಸಲಿದ್ದು ಎನ್ಡಿಎ ಅಭ್ಯರ್ಥಿ ಎಂ. ವೆಂಕಯ್ಯ ನಾಯ್ಡು ಅವರು ಉಪರಾಷ್ಟ್ರಪತಿಯಾಗಿ ಆಯ್ಕೆಯಾಗುವುದು ಖಚಿತವಾಗಿದೆ.

ಆಡಳಿತಾರೂಢ ಎನ್ಡಿಎಗೆ ಲೋಕಸಭೆಯಲ್ಲಿ ಬಹುಮತ ಇದೆ. ಹಾಗಾಗಿ ಎನ್ಡಿಎ ಅಭ್ಯರ್ಥಿ ಉಪರಾಷ್ಟ್ರಪತಿ ಆಗಲಿದ್ದಾರೆ. ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಅವರು ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.
ಶನಿವಾರ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಸಂಜೆ 7 ಗಂಟೆಯ ಹೊತ್ತಿಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

No comments