Breaking News

ತ್ರಿವಳಿ ತಲಾಖ್ ರದ್ದು ಪಡಿಸಿ ಸುಪ್ರೀಂ ಕೋರ್ಟ್ ಆದೇಶ ಮುಸ್ಲಿಂ ಮಹಿಳೆಯರ ಸಂಭ್ರಮಾಚರಣೆ


ದೇಶದಾದ್ಯಂತ ಬಹು ಚರ್ಚೆಗೆ ಒಳಗಾಗಿದ್ದ ಮುಸ್ಲಿಂ ಮಹಿಳೆಯ ಶೋಷಣೆಯ ತ್ರಿಪಲ್ ತಲಾಕ್ ರದ್ದು ಪಡಿಸುವಂತೆ  ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಮೂಲಗಳ ಪ್ರಕಾರ ಸಾಂವಿಧಾನಿಕ ಪೀಠದ ಪಂಚ ಸದಸ್ಯರ ಪೈಕಿ ಇಬ್ಬರು ಸದಸ್ಯರು ತ್ರಿವಳಿ ತಲಾಖ್ ಗೆ ಅನುಮೋದನೆ ನೀಡಿದ್ದು, ಉಳಿದ ಮೂವರು ನ್ಯಾಯಾಧೀಶರು ಮುಸ್ಲಿಂ ವೈಯುಕ್ತಿಕ ಕಾನೂನಿಗೆ ಸಂವಿಧಾನ ಮಾನ್ಯತೆ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಅದರಂತೆ ಬಹುಮತದ ಆಧಾರದ ಮೇಲೆ ತ್ರಿವಳಿ ತಲ್ಲಾಖ್ ಅನ್ನು ಮುಂದಿನ 6 ತಿಂಗಳ ಕಾಲ ರದ್ದು ಮಾಡಲಾಗಿದ್ದು, 6 ತಿಂಗಳೊಳಗೆ ಈ ಬಗ್ಗೆ ಸೂಕ್ತ ಕಾನಾನು ಜಾರಿಗೆ ತರುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಅ ಮೂಲಕ ಸುಪ್ರೀಂ ಕೋರ್ಟ್ ಸಂವಿಧಾನ ಪೀಠ ಚೆಂಡನ್ನು ಕೇಂದ್ರ ಸರ್ಕಾರದ ಅಂಗಳಕ್ಕೆ ತಳ್ಳಿದೆ.

ಮುಖ್ಯ ನ್ಯಾಯಮೂರ್ತಿ ಜೆ.ಎಸ್‌. ಖೇಹರ್‌ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ತ್ರಿವಳಿ ತಲಾಖ್‌ಗೆ ಸಂಬಂಧಿಸಿದ ವಿವಿಧ ಅರ್ಜಿಗಳನ್ನು ಒಟ್ಟುಗೂಡಿಸಿ ಸತತ ಆರು ದಿನ ವಿಚಾರಣೆ ನಡೆಸಿತ್ತು. ಮೇ 18ರಂದು ವಿಚಾರಣೆ ಪೂರ್ಣಗೊಂಡಿತ್ತು. ತೀರ್ಪು ಕಾಯ್ದಿರಿಸಲಾಗಿತ್ತು.

ಈ ತೀರ್ಪು ಹೊರ ಬೀಳುತ್ತಿದ್ದಂತೆ ದೇಶದಾದ್ಯಂತ ಮುಸ್ಲಿಂ ಮಹಿಳೆಯರು ಸಿಹಿ ಹಂಚಿ ಸಂಭ್ರಮಿಸಿದ್ದರು .

( ಏಜೆನ್ಸಿಸ್)

No comments