Breaking News

ಎಲ್ಲಾ ನಗರಗಳಲ್ಲೂ ಇಂದಿರಾ ಕ್ಯಾಂಟಿನ್ ಆರಂಭವಾಗಬೇಕು : ರಾಹುಲ್ ಸಲಹೆಬೆಂಗಳೂರು :   ಇಂದಿರಾ ಕ್ಯಾಂಟೀನ್‌‌ಗಳು ಎಲ್ಲಾ ನಗರಗಳಲ್ಲೂ ಆರಂಭವಾಗಬೇಕು. ಬಡತನದಿಂದ ಬಳಲುತ್ತಿರುವ ಪ್ರತಿ ವ್ಯಕ್ತಿಯೂ ಹಸಿವಿನಿಂದ ಮುಕ್ತವಾಗಬೇಕು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಹೇಳಿದ್ದಾರೆ.
ಇಂದಿರಾ ಕ್ಯಾಂಟೀನ್‌ನಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂಧಿಯವರು ವಾಂಗಿಬಾತ್ ಜೊತೆಗೆ ಮೊಸರನ್ನವಿದ್ದ ಊಟ ಮಾಡಿ ಸಂತಸ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಪರಮೇಶ್ವರ್ ಕೂಡ ರಾಹುಲ್‌ ಜೊತೆ ಊಟ ಸವಿದರು.

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಜಯನಗರ ವಾರ್ಡ್‌ನ ಕನಕನಪಾಳ್ಯ ಮುಖ್ಯರಸ್ತೆಯಲ್ಲಿ ಇಂದಿರಾ ಕ್ಯಾಂಟೀನ್‌‌ನನ್ನು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್ ಐತಿಹಾಸಿಕ ಯೋಜನೆಯಾಗಿದೆ ಎಂದು ಬಣ್ಣಿಸಿದರು.loading...

No comments