ಕರ್ನಾಟಕ ಚುನಾವಣಾ ರಣತಂತ್ರ ಸಂಸದರೊಂದಿಗೆ ಮೋದಿ ಸಮಾಲೋಚನೆ
ಬೆಂಗಳೂರು :ರಾಜ್ಯದ ವಿಧಾನಸಭೆ ಚುನಾವಣೆಗಳತ್ತ ಚಿತ್ತ ಹರಿಸಿರುವ ಪ್ರಧಾನಿ ನರೇಂದ್ರಮೋದಿಯವರು ಚುನಾವಣಾ ರಣತಂತ್ರ, ಸಿದ್ಧತೆಗಳ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷರು, ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು, ರಾಜ್ಯದ ಬಿಜೆಪಿ ಸಂಸದರೊಂದಿಗೆ ಇಂದು ಉಪಾಹಾರ ಸಭೆ ನಡೆಸಿದರು.
ನವದೆಹಲಿಯ ಲೋಕಕಲ್ಯಾಣ ಮಾರ್ಗ ರಸ್ತೆಯಲ್ಲಿರುವ ಪ್ರಧಾನಿಗಳ ಅಧಿಕೃತ ನಿವಾಸದಲ್ಲಿ ನಡೆದ ಈ ಸಮಾಲೋಚನಾ ಸಭೆಯಲ್ಲಿ ಮುಂದಿನ ಚುನಾವಣಾ ರಣತಂತ್ರಗಳ ಬಗ್ಗೆ ವಿವರವಾದ ಚರ್ಚೆಗಳು ನಡೆದವು ಎಂದು ಬಿಜೆಪಿ ಮೂಲಗಳು ಹೇಳಿವೆ.
ದಕ್ಷಿಣ ಭಾರತ ರಾಜ್ಯಗಳ ಸಂಸದರ ಜೊತೆ ಇಂದು ಸಮಾಲೋಚನೆ ನಡೆಸಿದ ಸಂದರ್ಭದಲ್ಲಿ ರಾಜ್ಯದ ಸಂಸದರೊಂದಿಗೂ ಪ್ರಧಾನಿ ಮೋದಿಯವರು ಸುಮಾರು ಹೊತ್ತು ರಾಜಕೀಯ ವಿದ್ಯಮಾನಗಳ ಬಗ್ಗೆ ಸುಮಾರು ಹೊತ್ತು ಮಾತುಕತೆ ನಡೆಸಿದರು.
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಹಣಿಯಲು ಯಾವ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜ್ಯಸರ್ಕಾರದ ವಿರುದ್ಧ ಹೋರಾಟಗಳನ್ನು ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆದಿವೆ.
ಮಂಗಳೂರಿನ ಗಲಭೆ, ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆಗಳ ಬಗ್ಗೆಯೂ ಚರ್ಚೆಗಳು ನಡೆದಿದ್ದು, ರಾಜ್ಯಸರ್ಕಾರದ ವೈಫಲ್ಯಗಳ ಸಾಂಘಿಕ ಹೋರಾಟ ನಡೆಸುವ ಬಗ್ಗೆ ಪ್ರಧಾನಿ ನರೇಂದ್ರಮೋದಿಯವರು ಕೆಲ ಸಲಹೆ ಸೂಚನೆಗಳನ್ನು ನೀಡಿದರು ಎನ್ನಲಾಗಿದೆ.
loading...
No comments