Breaking News

`ಉತ್ತಮ ಪ್ರಜಾ ಪಾರ್ಟಿ ಮೂಲಕ ರಾಜಕೀಯ ಮೈಲಿಗಲ್ಲು ಸ್ಥಾಪಿಸಲು ಹೊರಟ ಉಪ್ಪಿ



ಬೆಂಗಳೂರು: ಕನ್ನಡ ಚಿತ್ರನಟ ಉಪೇಂದ್ರ ಅವರು ಸ್ಥಾಪಿಸಲು ಉದ್ದೇಶಿಸಿರುವ ಹೊಸ ರಾಜಕೀಯ ಪಕ್ಷದ ಹೆಸರು ಪ್ರಜಾಕೀಯ ಅಲ್ಲ. ‘ಉತ್ತಮ ಪ್ರಜಾ ಪಾರ್ಟಿ.’ ಈ ಬಗ್ಗೆ ಉಪೇಂದ್ರ ಅವರು ತಮ್ಮ ಆಪ್ತರೊಂದಿಗೆ ಸಮಾಲೋಚನೆ ನಡೆಸಿದ ನಂತರ ತೀರ್ಮಾನ ಕೈಗೊಂಡಿದ್ದು,ಕರ್ನಾಟಕ ರಾಜಕೀಯದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಉಪೇಂದ್ರ ಸಜ್ಜಾಗಿದ್ದಾರೆ .

ಈ ಹೊಸ ಪಕ್ಷದ ಸದಸ್ಯತ್ವ ಪಡೆದುಕೊಳ್ಳಲು ಬಯಸುವವರಿಗೆ ಅರ್ಜಿಯನ್ನೂ ಸಿದ್ಧಪಡಿಸಲಾಗಿದೆ. ಆಸಕ್ತರು ಇತರೆ ಎಲ್ಲ ವೈಯಕ್ತಿಕ ವಿವರಗಳ ಜೊತೆ ತಮ್ಮ ಎರಡು ಭಾವಚಿತ್ರಗಳು, ಆಧಾರ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿಯ ಎರಡು ಪ್ರತಿಗಳನ್ನೂ ಅರ್ಜಿಯೊಂದಿಗೆ ಲಗತ್ತಿಸಬೇಕು ಎಂಬುದನ್ನು ಸ್ಪಷ್ಟವಾಗಿ ನಮೂದಿಸಲಾಗಿದೆ.ಎಂದು ಮೂಲಗಳು ತಿಳಿಸಿವೆ .





loading...

No comments