Breaking News

ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ


ನವದೆಹಲಿ : ದೇಶದ 15ನೇ ಉಪ ರಾಷ್ಟ್ರಪತಿ ಚುನಾವಣೆಗೆ ಶನಿವಾರ ನಡೆದ ಮತದಾನದಲ್ಲಿ ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಎಂ.ವೆಂಕಯ್ಯನಾಯ್ಡು 516 ಮತಗಳಿಂದ ಚುನಾಯಿತರಾಗಿದ್ದಾರೆ.ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಅವರು 244 ಮತ ಪಡೆದಿದ್ದಾರೆ.

ಉಪರಾಷ್ಟ್ರಪತಿ ಆಯ್ಕೆಗೆ ನಡೆದ ಮತದಾನದಲ್ಲಿ ಶೇಕಡಾ 98.21ರಷ್ಟು ಮತ ಚಲಾವಣೆಯಾಗಿವೆ. ಒಟ್ಟು 785 ಸಂಸದರ ಪೈಕಿ 771 ಮಂದಿ ಹಕ್ಕು ಚಲಾಯಿಸಿದ್ದಾರೆ ಸಹಾಯಕ ಚುನಾವಣಾ ಅಧಿಕಾರಿ ಮುಕುಲ್‌ ಪಾಂಡೆ ತಿಳಿಸಿದ್ದಾರೆ.




loading...

No comments