Breaking News

ಬಹಿರಂಗ ಜಟಾಪಟಿಗೆ ತಾರ್ಕಿಕ ಅಂತ್ಯ; ರೋಹಿಣಿ ಸಿಂಧೂರಿ, ಶಿಲ್ಪಾನಾಗ್ ವರ್ಗಾವಣೆ ಮಾಡಿದ ಸರಕಾರ

 ಮೈಸೂರು ಐಎಎಸ್ ಅಧಿಕಾರಿಗಳ ಜಟಾಪಟಿಗೆ ರಾಜ್ಯ ಸರ್ಕಾರ ತಾರ್ಕಿಕ ಅಂತ್ಯ ದೊರೆತಿದ್ದು, ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಆಯುಕ್ತರ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.


ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಡಾ. ಬಗಾದಿ ಗೌತಮ್‌ ಅವರನ್ನು ನೇಮಕ ಮಾಡಲಾಗಿದೆ. ಅವರು ಇಲ್ಲಿಯವರೆಗೆ ಬೆಂಗಳೂರು ಕಮರ್ಷಿಯಲ್‌ ಟ್ಯಾಕ್ಸ್‌ (ಜಾರಿ) ವಿಭಾಗದ ಹೆಚ್ಚುವರಿ ಆಯುಕ್ತರಾಗಿದ್ದರು.ಇನ್ನು ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್‌ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ (ಇ ಗವರ್ನೆನ್ಸ್‌) ನಿರ್ದೇಶಕರ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.



No comments