ಶೋಪಿಯಾನ್ ಎನ್ಕೌಂಟರ್ ಓರ್ವ ಉಗ್ರ ಹತ, ಮುಂದುವರಿದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಮುಂದುವರೆದಿದ್ದು, ಇಂದು ನಡೆದ ಸೇನಾ ಎನ್ಕೌಂಟರ್ ನಲ್ಲಿ ಓರ್ವ ಉಗ್ರ ಹತನಾಗಿದ್ದು, ಅವಿತಿರುವ ಮತ್ತಷ್ಟು ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರೆದಿದೆ.ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹಂಜಿಪೋರಾದಲ್ಲಿ ಉಗ್ರರು ಅವಿತಿರುವ ಕುರಿತು ಮಾಹಿತಿ ತಿಳಿದ ಸೇನಾಪಡೆಗಳು ಕೂಡಲೇ ಸ್ಥಳಕ್ಕೆ ಧಾವಿಸಿವೆ. ಈ ವೇಳೆ ಉಗ್ರರು ಸೈನಿಕರತ್ತ ಗುಂಡಿನ ಸುರಿಮಳೆಗರೆದಿದ್ದಾರೆ. ಈ ವೇಳೆ ಸೈನಿಕರು ಪ್ರತಿದಾಳಿ ನಡೆಸಿದ್ದು, ಓರ್ವ ಸಾವನ್ನಪ್ಪಿದ್ದಾನೆ.
ಮೃತ ಉಗ್ರನ ಗುರುತು ಪತ್ತೆಯಾಗಿಲ್ಲವಾದರೂ ಘಟನಾ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅವಿತಿದ್ದಾರೆ ಎನ್ನಲಾಗಿದೆ. ಹೀಗಾಗಿ ಕಾರ್ಯಾಚರಣೆ ಮುಂದುವರೆದಿದೆ. ಅಂತೆಯೇ ಉಗ್ರರು ತಪ್ಬಿಸಿಕೊಳ್ಳದಂತೆ ಸೈನಿಕರು ಸುತ್ತುವರೆದಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
No comments